ನವದೆಹಲಿ:
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆಯನ್ನು ಪ್ರಾರಂಭಿಸಿದ್ದಾರೆ. ಲೋಕಸಭೆಗೆ ಸ್ಪೀಕರ್ ಓಂ ಬಿರ್ಲಾ ಆಗಮಿಸುತ್ತಿದ್ದಂತೆ ಪ್ರತಿಪಕ್ಷಗಳು ಗದ್ದಲ ಸೃಷ್ಟಿಸಿವೆ. ನಿನ್ನೆ ನಡೆದ ರಾಷ್ಟ್ರಪತಿ ದ್ರೌಪದಿ ಮರ್ಮು ಅವರ ಭಾಷಣದ ಮೇಲೆ ಚರ್ಚೆ ನಡೆಯಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದವು. ಇದಕ್ಕೆ ಸ್ಪೀಕರ್ ನಿರಾಕರಿಸಿದ್ದಾರೆ.
ಪ್ರತಿಪಕ್ಷಗಳು ಗದ್ದಲದ ನಡುವೆಯೇ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಓದಲು ಪ್ರಾರಂಭಿಸಿದರು. ಇದರಿಂದ ಪ್ರತಿಪಕ್ಷಗಳ ಗದ್ದಲ ಮತ್ತಷ್ಟು ಹೆಚ್ಚಾಗಿತ್ತು. ಕೊನೆಗೆ ಪ್ರತಿಪಕ್ಷ ನಾಯಕರು ಸಭಾತ್ಯಾಗ ಮಾಡಿದ ಘಟನೆಯೂ ನಡೆದಿದೆ. ಇನ್ನು ಬಜೆಟ್ ಭಾಷಣ ಆರಂಭಿಸಿದ ನಿರ್ಮಾಲಾ ಬಡತನ ನಿರ್ಮೂಲನೆಗೆ ಈ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ ಎಂದು ಹೇಳಿದ್ದಾರೆ.