ಎಲ್ಲಾ ಹಂತದ ಕೇಂದ್ರ ಸರ್ಕಾರಿ ನೌಕರರ ವರ್ಕ್ ಫ್ರಮ್ ಹೋಮ್ ಅನ್ನು ಕ್ಯಾನ್ಸಲ್ ಮಾಡಲಾಗಿದೆ.
ಸೋಮವಾರದಿಂದ ಎಲ್ಲರೂ ಕಚೇರಿಗೆ ಬರಬೇಕು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿರುವ ಹಿನ್ನೆಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಭಾನುವಾರ ಹೇಳಿದ್ದಾರೆ.
ಸಾಂಕ್ರಾಮಿಕ ಪರಿಸ್ಥಿತಿಯ ಅವಲೋಕನವನ್ನು ಭಾನುವಾರ ನಡೆಸಲಾಯಿತು. ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಪಾಸಿಟಿವಿಟಿ ದರ ಸಹ ಕಡಿಮೆಯಾಗಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಸೋಮವಾರದಿಂದ ಎಲ್ಲರೂ ಕಚೇರಿಗೆ ಬರಬೇಕು. ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ.
ಈ ನಿಯಮ ಫೆಬ್ರವರಿ 7, 2022ರಿಂದ ಜಾರಿಗೆ ಬರಲಿದೆ ಎಂದು ಸಚಿವರು ಹೇಳಿದ್ದಾರೆ. ಕಚೇರಿಗೆ ಬರುವ ಇಲಾಖೆಗಳ ಮುಖ್ಯಸ್ಥರು, ನೌಕರರು ಎಲ್ಲಾ ಸಮಯದಲ್ಲೂ ಮಾಸ್ಕ್ನ ಧರಿಸಬೇಕು ಮತ್ತು ಕೋವಿಡ್ ನಿಯಮಗಳನ್ನು ಅನುಸರಿಸಬೇಕು ಎಂದು ಅವರು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ