ಹುಬ್ಬಳ್ಳಿ :
ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪರ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಪ್ರಚಾರ ನಡೆಸಲಿದ್ದಾರೆ.
ನಗರದ ಗೋಕುಲ್ ರಸ್ತೆಯ ಖಾಸಗಿ ಹೋಟೆಲ್ ನಲ್ಲಿ ಸಾರ್ವಜನಿಕ ಸಭೆ ಕರೆದಿರುವ ಸುಷ್ಮಾ ಸ್ವರಾಜ್ ಮತಯಾಚನೆ ಮಾಡಲಿದ್ದಾರೆ. ಈ ವೇಳೆ ರಾಷ್ಟ್ರೀಯ ಬಿಜೆಪಿ ಕಾರ್ಯದರ್ಶಿ ಮುರುಳಿಧರ್ ರಾವ್ ಕೂಡ ಸುಷ್ಮಾ ಸ್ವರಾಜ್ ಅವರಿಗೆ ಸಾಥ್ ನೀಡಲಿದ್ದಾರೆ.
ಇಂದು ಮಧ್ಯಾಹ್ನ 1.30 ಸುಮಾರಿಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಲಿರುವ ಸುಷ್ಮಾ ಸ್ವರಾಜ್ ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಖಾಸಗಿ ಹೋಟೆಲ್ ಗೆ ಹೋಗಿ ವಿಶ್ರಾಂತಿ ಪಡೆಯಲಿದ್ದಾರೆ. ಬಳಿಕ ಸಾರ್ವಜನಿಕರ ಸಭೆಯಲ್ಲಿ ಭಾಗಿಯಾಗಿ ಪ್ರಹ್ಲಾದ್ ಜೋಶಿ ಪರ ಮತಯಾಚನೆ ಮಾಡಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ