ವಿವಿಧತೆಯಲ್ಲಿ ಏಕತೆ ಭಾರತದ ವೈಶಿಷ್ಟ್ಯ

ತುಮಕೂರು:

                    ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಸಂದೇಶ ನೀಡಿದ ಗೃಹ ಸಚಿವ

ಭಾರತೀಯಸಂವಿಧಾನವು ವಿವಿಧ ಧರ್ಮ, ಬಣ್ಣ, ಭಾಷೆ, ಸಂಸ್ಕøತಿ, ಆಚಾರ-ವಿಚಾರಗಳ ವೈವಿಧ್ಯತೆಯ ನಡುವೆ ದೇಶದ ಏಕತೆಯನ್ನು ಸಾರುವ ಮಾದರಿ ಪ್ರಜಾತಂತ್ರ ವ್ಯವಸ್ಥೆಯಾಗಿದೆ ಎಂದು ಗೃಹ ಹಾಗೂ ನೂತನ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ 73ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವರಕ್ಷೆ ಸ್ವೀಕರಿಸಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ನೇತೃತ್ವದ ಸಂವಿಧಾನ ರಚನಾ ಸಮಿತಿ 2 ಕರಡು ಪ್ರತಿಯ ಬಗ್ಗೆ ಚರ್ಚೆ ನಡೆದು ಅಂತಿಮವಾಗಿ 1949ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು.

ಇದೇ ದಿನವನ್ನು ಪ್ರತಿ ವರ್ಷ ಗಣರಾಜ್ಯ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಪದ್ಮಭೂಷಣ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾಗಿ 3 ವರ್ಷ ಸಂದಿದ್ದು, ಪೂಜ್ಯ ಸ್ವಾಮೀಜಿಯವರು ಲಿಂಗೈಕ್ಯರಾದ ದಿನವಾದ ಜನವರಿ 21ನ್ನು ರಾಜ್ಯ ಸರ್ಕಾರವು ದಾಸೋಹ ದಿನವೆಂದು ಘೋಷಿಸಿ, ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಶ್ರೀಗಳ ಭಾವಚಿತ್ರ್ರಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಕ ಎಲ್ಲ ಸರ್ಕಾರಿ ಕಚೇರಿಗಳಿಗೆ ವಿತರಿಸಲಾಗಿದೆ ಎಂದರು.

ಕೋವಿಡ್ ನಿರ್ವಹಣೆ, ಅಭಿವೃದ್ಧಿ ಹಾದಿಯಲ್ಲಿ ಜಿಲ್ಲೆ: ಜಿಲ್ಲೆಯಲ್ಲಿ ಮುಖ್ಯಮಂತ್ರಿ ಅವರು 99 ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಹಾಸಿಗೆಗಳುಳ್ಳ “ಪೆರಿಫೆರಲ್ ಕ್ಯಾನ್ಸರ್ ಕೇಂದ್ರ”, 20 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆಗಳುಳ್ಳ “ತಾಯಿ-ಮಕ್ಕಳ ಆಸ್ಪತ್ರೆ” ಹಾಗೂ 50ಲಕ್ಷ ರೂ.

ವೆಚ್ಚದಲ್ಲಿ 10 ಹಾಸಿಗೆಗಳುಳ್ಳ “ಪೌಷ್ಟಿಕ ಪುನಃಶ್ಚೇತನ ಕೇಂದ್ರ”ಗಳ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆಯನ್ನು ಈಗಾಗಲೇ ನೆರವೇರಿಸಿದ್ದು, ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಸಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಜಿಲ್ಲೆಯಲ್ಲಿ ಕೋವಿಡ್- ಸೋಂಕು ನಿರ್ವಹಣೆಗಾಗಿ ಎಲ್ಲಾ ತಾಲೂಕುಗಳಲ್ಲಿಯೂ ಆಕ್ಸಿಜûನ್ ಪ್ಲಾಂಟ್‍ಗಳು,

ಆರ್‍ಟಿಪಿಸಿಆರ್ ಲ್ಯಾಬ್‍ಗಳನ್ನು, ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯ ಮೊದಲನೇ ಡೋಸ್ ಅನ್ನು ಶೇ.100ರಷ್ಟು ಹಾಗೂ ಶೇ.85ರಷ್ಟು ಎರಡನೇ ಡೋಸ್ ಲಸಿಕಾಕರಣ ಪೂರ್ಣಗೊಳಿಸಲಾಗಿದೆ. ಬೂಸ್ಟರ್ ಡೋಸ್‍ಗೆ ಸಂಬಂಧಿಸಿದಂತೆ ಶೇ.60ರಷ್ಟು ಆರೋಗ್ಯ ಕಾರ್ಯಕರ್ತರು,

ಶೇ. 52ರಷ್ಟು ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸುವ ಮೂಲಕ ಕೋವಿಡ್ ಹರಡುವಿಕೆಯನ್ನು ತಡೆಗಟ್ಟಬೇಕೆಂದರು.

ಧ್ವಜಾರೋಹಣ ಕಾರ್ಯಕ್ರಮದಲ್ಲಿ ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್, ಎಂಎಲ್ಸಿಗಳಾದ ಚಿದಾನಂದ ಎಂ.ಗೌಡ, ಆರ್.ರಾಜೇಂದ್ರ, ಮೇಯರ್ ಬಿ.ಜಿ. ಕೃಷ್ಣಪ್ಪ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಎಸ್ಪಿ ರಾಹುಲ್ ಕುಮಾರ್ ಶಹಪೂರ್ ವಾಡ್, ಜಿಪಂ ಸಿಇಓ ಡಾ. ಕೆ. ವಿದ್ಯಾಕುಮಾರಿ,

ಉಪವಿಭಾಗಾಧಿಕಾರಿ ಅಜಯ್, ತಹಶೀಲ್ದಾರ್ ಜಿ. ಮೋಹನ್ ಕುಮಾರ್, ಆಯುಕ್ತೆ ರೇಣುಕಾ, ಡಿಡಿಪಿಐ ನಂಜಯ್ಯ, ಸರಕಾರಿ ನೌಕರರ ಸಂಘದ ಅಧ್ಯಕ್ಷ ನರಸಿಂಹರಾಜು ಸೇರಿದಂತೆ ವಿವಿಧ ಅಧಿಕಾರಿ, ಸಿಬ್ಬಂದಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಡಿಎಆರ್ ತುಕುಡಿ, ಪೊಲೀಸ್ ಬ್ಯಾಂಡ್, ಮಾಜಿ ಸೈನಿಕರು, ಸ್ಕೌಟ್ಸ್ ಅಂಡ್ ಗೈಡ್ಸ್, ಎನ್‍ಸಿಸಿ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

ಕ್ರೀಡಾ ಸಾಧಕರಿಗೆ ಸನ್ಮಾನ:

ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕಿರಣ್‍ನಂದನಾ, ಎಸ್.ಆರ್.ಯಶಸ್. ವಿಜೇತ ಶೆಟ್ಟಿ, ಪುಷ್ಕರ್, ಟಿ.ಎಂ.ಧ್ಯಾನ್, ರೋಹನ್‍ಗೌಡ, ಅಭಿಷೇಕ್, ಚಿರಂತ್, ಸಂಧ್ಯಾ, ಕೃಷಿಕ್, ನರೇಶ್‍ಬಾಬು, ಚಿಕ್ಕತಿಮ್ಮಯ್ಯ, ಪ್ರಜ್ವಲ್, ನವೀನ್, ಭರತ್, ಮಹೇಶ್, ದೀಪಶ್ರೀ, ಸಂಜು ಅವರನ್ನು ಸನ್ಮಾನಿಸಲಾಯಿತು.
ಬಾಕ್ಸ್
ಕಾನೂನು ಸಚಿವರ ಗೈರು, ಕಾಂಗ್ರೆಸ್ ಖಂಡನೆ

ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ವಂಚಿತರಾದ ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಸ್ವಕ್ಷೇತ್ರ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆದ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಗೈರಾಗಿದ್ದು ಟೀಕೆಗೆ ಗುರಿಯಾಗಿದೆ. ಉಸ್ತುವಾರಿ ಸ್ಥಾನ ಕೈತಪ್ಪಿದ್ದು ಅವರ ಪಕ್ಷದ ಆಂತರಿಕ ವಿಚಾರ.

ಕಾನೂನು ಸಚಿವರಾಗಿ, ಲಾಪದವೀಧರರಾಗಿ ಸಂವಿಧಾನದ ಬಗ್ಗೆ ಗೌರವವುಳ್ಳವರಾಗಿ ಅವರು ಕಾರ್ಯಕ್ರಮಕ್ಕೆ ತಪ್ಪಿಸಿಕೊಳ್ಳಬಾರದಿತ್ತು., ಅವರ ನಡೆ ಖಂಡನೀಯ ಎಂದು ಸಮಾರಂಭದ ಸ್ಥಳದಲ್ಲೆ ಚಿ.ನಾ.ಹಳ್ಳಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಚಂದ್ರಶೇಖರ್ ತಹಸೀಲ್ದಾರ್ ಬಳಿ ಅಸಮಾಧಾನ ವ್ಯಕ್ತಪಡಿಸಿ,ಇದು ಸಂವಿಧಾನಕ್ಕೆ ಮಾಡಿದ ಅವಮಾನ, ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಸಮಾನತೆ, ಸಹಿಷ್ಣುತೆ ಗಣತಂತ್ರದ ಮೂಲ ಆಶಯ

ಪ್ರಪಂಚದ ಹಲವಾರು ಸಂವಿಧಾನಗಳನ್ನು ಆಳವಾಗಿ ಅಧ್ಯಯನ ಮಾಡಿ, ಭಾರತೀಯ ಸಮಾಜಕ್ಕೆ ಪೂರಕವಾಗುವ ಉತ್ತಮ ಅಂಶಗಳನ್ನು ನಮ್ಮ ಸಂವಿಧಾನದಲ್ಲಿ ಅಳವಡಿಸಿ ದೇಶಕ್ಕೆ ಅರ್ಪಣೆ ಮಾಡಿದ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ ಕಾರ್ಯ ಚಿರಸ್ಮರಣೀಯ.

ಸಂವಿಧಾನ ರಚನಾಕಾರರಲ್ಲಿ ಒಬ್ಬರಾದ ಕರ್ನಾಟಕದ ಹೆಮ್ಮೆಯ ಪುತ್ರ ಬೆನಗಲ್ ನರಸಿಂಹರಾವ್ ಅವರೂ ಕೂಡ ಉತ್ತಮ ಅಂಶಗಳನ್ನು ನಮ್ಮ ಸಂವಿಧಾನಕ್ಕೆ ಸೇರಿಸಿದ್ದಾರೆ. ವಿವಿಧತೆಯಲ್ಲಿ ಏಕತೆ, ವೈವಿಧ್ಯಮಯ ಸಂಸ್ಕøತಿ, ಶ್ರೀಮಂತ ಇತಿಹಾಸವು ಸಮಗ್ರ ಭಾರತದ ಪರಿಕಲ್ಪನೆಯ ಅಡಿಪಾಯಗಳಾಗಿದ್ದು, ಶಾಂತಿ, ಅಹಿಂಸೆ, ಸಮಾನತೆ, ಸಹಬಾಳ್ವೆ ಮತ್ತು ಸರ್ವಧರ್ಮ ಸಹಿಷ್ಣುತೆ ನಮ್ಮ ಗಣತಂತ್ರ ವ್ಯವಸ್ಥೆಯ ಮೂಲ ಆಶಯವಾಗಿದೆ.

-ಆರಗಜ್ಞಾನೇಂದ್ರ, ಗೃಹ, ಜಿಲ್ಲಾ ಉಸ್ತುವಾರಿ ಸಚಿವರು.

ಸಿದ್ಧಗಂಗಾ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮೊದಲ ಬಾರಿಗೆ ಭೇಟಿಕೊಟ್ಟ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗಸ್ವಾಮೀಜಿ ಆಶೀರ್ವದಿಸಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್, ಮೇಯರ್ ಬಿ.ಜಿ.ಕೃಷ್ಣಪ್ಪ, ಗೃಹ ಮಂಡಳಿ ನಿರ್ದೇಶಕ ಬ್ಯಾಟರಂಗೇಗೌಡ, ಎಪಿಎಂಸಿ ಅಧ್ಯಕ್ಷ ಕೆ.ಎಂ.ಉಮೇಶ್‍ಗೌಡ ಇತರರಿದ್ದರು.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link