ದೆಹಲಿ :
ಸಬ್ಸಿಡಿರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 100 ರೂ. ಇಳಿಕೆ ಮಾಡುವುದರ ಮೂಲಕ ಕೇಂದ್ರ ಸರ್ಕಾರ ಗ್ರಾಹಕರಿಗೆ ಸಿಹಿಸುದ್ಧಿ ನೀಡಿದೆ.
ಅಡುಗೆ ಅನಿಲ ಸಿಲಿಂಡರ್ ಬೆಲೆ ಇಂದಿನಿಂದ ಕಡಿಮೆಯಾಗಲಿದ್ದು, ಭಾನುವಾರ ಮಧ್ಯರಾತ್ರಿಯೇ ಸಬ್ಸಿಡಿರಹಿತ ಅಡುಗೆ ಅನಿಲ ಸಿಲಿಂಡರ್ ದರ 737.50ರೂ. ಯಿಂದ 637ಕ್ಕೆ ಇಳಿಕೆಯಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಶನ್ (ಐಒಸಿ) ತಿಳಿಸಿದೆ. ಇನ್ನು ಸಬ್ಸಿಡಿ ಸಹಿತ ಸಿಲಿಂಡರ್ ಗಳ ಬೆಲೆಯನ್ನು ಯಥಾ ಸ್ಥಿತಿಯಲ್ಲಿ ಮುಂದುವರೆಸಲಾಗಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಏರಿಕೆಯಾಗಿದ ಹಿನ್ನೆಲೆಯಲ್ಲಿ ಎಲ್‍ಪಿಜಿ ಸಿಲಿಂಡರ್ ಬೆಲೆ ಪರಿಷ್ಕರಣೆಯಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ