ಉತ್ತರ ಪ್ರದೇಶ:
ಈ ಬಾರಿಯ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಮತ್ತೊಮ್ಮೆ ಜಯಭೇರಿ ಬಾರಿಸಿದ್ದು, ಯೋಗಿ ಆದಿತ್ಯನಾಥ್ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.ಉತ್ತರ ಪ್ರದೇಶ ಮುಖ್ಯಮಂತ್ರಿಯಾಗುವ ಮುನ್ನ ಯೋಗಿ ಆದಿತ್ಯನಾಥ ಸಂಸದರಾಗಿದ್ದರು.ಅಲ್ಲದೆ ಅದಕ್ಕೂ ಮುನ್ನ ಸನ್ಯಾಸ ದೀಕ್ಷೆ ಸ್ವೀಕರಿಸಿದ ಬಳಿಕ ಅವರು ತಮ್ಮ ಕುಟುಂಬದಿಂದ ದೂರವಿದ್ದರು.
ಇದೀಗ ಖಾಸಗಿ ಕಾರ್ಯಕ್ರಮದ ಅಂಗವಾಗಿ ತಮ್ಮ ಹುಟ್ಟೂರಾದ ಉತ್ತರಾಖಂಡದ ಪೌರಿಗೆ 28 ವರ್ಷಗಳ ಬಳಿಕ ಯೋಗಿ ಆದಿತ್ಯನಾಥ್ ಅವರು ತೆರಳಿದ್ದು, ಈ ವೇಳೆ ತಮ್ಮ ತಾಯಿ ಸಾವಿತ್ರಿ ದೇವಿ ಅವರನ್ನು ಭೇಟಿ ಮಾಡಿ ಕಾಲಿಗೆ ನಮಸ್ಕರಿಸಿದ್ದಾರೆ. ಇದರ ಫೋಟೋವನ್ನು ಯೋಗಿ ಆದಿತ್ಯನಾಥ್ ಅವರು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
