ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಿಎಂ ಸಹಮತ : ಲಕ್ಷ್ಮೀ ಹೆಬ್ಬಾಳ್ಕರ್‌

 ಬೆಂಗಳೂರು

    ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

    ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚನೆಗೆ ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು.

   ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆಐ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು ಎಂದರು.

   ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Recent Articles

spot_img

Related Stories

Share via
Copy link
Powered by Social Snap