ಕೋಲಾರ :
ಕೋಲಾರ ತಾಲ್ಲೂಕು ವೇಮಗಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಸುಮಾರು ವರ್ಷಗಳಿಂದ ರಾಷ್ಟ್ರ ನಾಯಕರ ಭಾವಚಿತ್ರಗಳು ಉಪ ಪ್ರಾಂಶುಪಾಲರ ಕೊಠಡಿಯಲ್ಲಿ ಹಾಕಲಾಗಿತ್ತು. ಇದರಲ್ಲಿ ರಾಷ್ಟ್ರ ನಾಯಕ ಸಂವಿಧಾನ ಶಿಲ್ಪಿ ಡಾ ಬಿ ಆರ್.ಅಂಬೇಡ್ಕರ್ ರವರ ಭಾವಚಿತ್ರವು ಸಹ ಇದ್ದು, ಈಗ ಉಪ ಪ್ರಾಂಶುಪಾಲರಾಗಿ ಸುಮಾರು ನಾಲ್ಕೈದು ತಿಂಗಳ ಹಿಂದೆ ಪ್ರಭಾರ ಉಪ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸುತ್ತಿರುವ ಸುಮಾ ರವರು ತಮ್ಮ ಕೊಠಡಿಯಲ್ಲಿದ್ದ ಡಾ. ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ತೆರವುಗೊಳಿಸಿ ಅಂಬೇಡ್ಕರ್ ರವರಿಗೆ ಅಪಮಾನ ಮಾಡಿರುತ್ತಾರೆ ಎಂದು ದಲಿತ ಸಂಘಟನಗಳ ಮುಖಂಡರು ಆರೋಪಿಸಿದ್ದಾರೆ.
ಸುಮಾರು ೪-೫ ತಿಂಗಳಿಗಳಿ0ದ ಅನೇಕ ಬಾರಿ ಇವರ ಗಮನಕ್ಕೂ ತಂದರು ಸಹ ಅಂಬೇಡ್ಕರ್ ಭಾವಚಿತ್ರವನ್ನು ಹಾಕಿರುವುದಿಲ್ಲ ಆದ್ದರಿಂದ ಅಂಬೇಡ್ಕರ್ ರವರಿಗೆ ಅಪಮಾನ ಮಾಡಿರುವ ಈ ದಲಿತ ವಿರೋಧಿ ಉಪ ಪ್ರಾಂಶುಪಾಲರಾದ ಸುಮಾ ಅವರನ್ನು ಈ ಕೂಡಲೇ ಅಮಾನತ್ತು ಗೊಳಿಸಿ ಅವರ ಮೇಲೆ ದಲಿತ ದೌರ್ಜನ್ಯ ಕಾಯಿದೆ ಅಡಿಯಲ್ಲಿ ಕೇಸು ದಾಖಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ಚನ್ನಪ್ಪನಹಳ್ಳಿ ದಲಿತ ನಾಗರಾಜ.ಜಿ ರವರು ವೇಮಗಲ್ ಪೊಲೀಸರಿಗೆ ದೂರು ನೀಡಿದ್ದಾರೆ.
ಸುಮಾ ರವರನ್ನು ಅಮಾನತ್ತುಗೊಳಿಸಿ ಅವರ ವಿರುದ್ಧ ದಲಿತ ದೌರ್ಜನ್ಯದ ಅಡಿಯಲ್ಲಿ ಕೇಸು ದಾಖಲಿಸಿ ಕ್ರಮ ಕೈಗೊಳ್ಳದ ಪಕ್ಷದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ಜಿಲ್ಲಾ ಸಮಿತಿಯ ಕಾರ್ಯದರ್ಶಿ ಚನ್ನಪ್ಪನಹಳ್ಳಿ ದಲಿತ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.