ಬೆಂಗಳೂರು :.
ಉರಿಗೌಡ, ನಂಜೇಗೌಡ ಸಿನಿಮಾ ಸ್ಥಗಿತಗೊಳಿಸಲು ಗುರುಗಳು ತಿಳಿಸಿದ ಹಿನ್ನೆಲೆಯಲ್ಲಿ ಗುರುಗಳು ಹೇಳಿದಂತೆ ಕೇಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಚಿವ ಹಾಗೂ ಸಿನಿಮಾ ನಿರ್ಮಾಪಕ ಮುನಿರತ್ನ ಅವರು ಸಿನಿಮಾ ಮಾಡುತ್ತಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಮುನಿರತ್ನ ಅವರು ಸಿನಿಮಾ ಮಾಡಲು ಹೊರಟಿದ್ದು, ಅದರ ಬಗ್ಗೆ ನನಗೆ ಪೂರ್ಣ ಮಾಹಿತಿ ಇಲ್ಲ. ಅವರಿಂದ ಪೂರ್ತಿ ಮಾಹಿತಿ ತಿಳಿದ ನಂತರ ಮಾತನಾಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಶ್ರೀಗಳು ಬೇಡ ಎಂದಿದ್ದಕ್ಕೆ ಮುನಿರತ್ನ ಹಿಂದೆ ಸರಿದಿದ್ದಾರೆಯೆ ಎಂಬ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
