ಚೆನ್ನೈ:
ಕೇಂದ್ರ ಸರ್ಕಾರದ ಎಲ್ಲ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಒತ್ತಾಯಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು, ದೇಶದ ಎಲ್ಲ ರಾಜ್ಯಗಳ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ಸಿಗಬೇಕು ಎಂದು ಹೇಳಿದ್ದಾರೆ.
ಮುಂದಿನ ವರ್ಷದಿಂದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(ಸಿಎಪಿಎಫ್) ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ಕೇಂದ್ರದ ನಿರ್ಧಾರವನ್ನು ಸ್ಟಾಲಿನ್ ಸ್ವಾಗತಿಸಿದ್ದಾರೆ.
ಎಲ್ಲಾ ಕೇಂದ್ರ ಸರ್ಕಾರದ ಪರೀಕ್ಷೆಗಳನ್ನು ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ನಾವು ಒತ್ತಾಯಿಸುತ್ತೇವೆ” ಎಂದು ಸ್ಟಾಲಿನ್ ಅವರು ಸೋಮವಾರ ‘ಉಂಗಲಿನ್ ಒರುವನ್’ ವೀಡಿಯೊ ಸರಣಿಯಲ್ಲಿ ಹೇಳಿದ್ದಾರೆ.