ಡೆಹ್ರಾಡೂನ್:
ಚಾರ್ ಧಾಮ್, ಕೇದಾರನಾಥ, ಬದರಿನಾಥ, ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳಿಗೆ ಭೇಟಿ ನೀಡಬಹುದಾದ ದೈನಂದಿನ ಭಕ್ತರ ಸಂಖ್ಯೆಯನ್ನು ಮಿತಿಗೊಳಿಸಲು ರಾಜ್ಯ ಸರ್ಕಾರ ಈ ಹಿಂದೆ ನಿರ್ಧರಿಸಿತ್ತು. ಆದರೆ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಅರ್ಚಕರು ಮತ್ತು ಪ್ರವಾಸ ಆಯೋಜಕರ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಧಾಮಿ ಅವರು ತಮ್ಮ ನಿರ್ಧಾರವನ್ನು ಹಿಂಪಡೆದಿದ್ದಾರೆ.
ದೇವಾಲಯಗಳಿಗೆ ಭೇಟಿ ನೀಡುವ ಯಾತ್ರಿಕರ ದೈನಂದಿನ ಸಂಖ್ಯೆಗೆ ಮಿತಿ ಹಾಕುವ ನಿರ್ಧಾರವನ್ನು ಹಿಂಪಡೆಯಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಧಾ ರಾತುರಿ ಆದೇಶ ಹೊರಡಿಸಿದ್ದಾರೆ.
ಆದಾಗ್ಯೂ, ಯಾತ್ರೆಗೆ ಬರುವ ಯಾತ್ರಾರ್ಥಿಗಳಿಗೆ ಆನ್‌ಲೈನ್ ಮತ್ತು ಆಫ್‌ಲೈನ್ ನೋಂದಣಿ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ. ಏಕೆಂದರೆ ಇದು ಅವರನ್ನು ಟ್ರ್ಯಾಕ್ ಮಾಡಲು ಸಹಾಯ ಮಾಡುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ