ನನ್ನ ಮತ್ತು ಅಶೋಕ್ ನಡುವೆ ಸಣ್ಣ ಭಿನ್ನಾಭಿಪ್ರಾಯ ವೂ ಇಲ್ಲ: ವಿ. ಸೋಮಣ್ಣ

ಬೆಂಗಳೂರು

ನನ್ನ ಮತ್ತು ವಿರೋಧ ಪಕ್ಷದ ನಾಯಕ ಆರ್​ ಅಶೋಕ್ ಮಧ್ಯೆ ಸಣ್ಣ ಭಿನ್ನಾಭಿಪ್ರಾಯ ಸಹ ಇಲ್ಲ. ವಿಪಕ್ಷ ನಾಯಕ ಅಶೋಕ್​ ನನ್ನ ಭೇಟಿಗೆ ಪ್ರಯತ್ನ ಮಾಡಿದ್ದರು.

ನಾನು ಮತ್ತು ಅಶೋಕ್ ಸ್ನೇಹಿತರು ಎಂದು ಮಾಜಿ ಸಚಿವ ವಿ. ಸೋಮಣ್ಣ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶೋಕ್ ಮೊದಲು ಶಾಸಕನಾದಾಗ ನಾನು ಮಂತ್ರಿಯಾಗಿದ್ದೆ.

ವಿಪಕ್ಷ ನಾಯಕ ಅಶೋಕ್​ ನನಗಿಂತ 14 ವರ್ಷ ಚಿಕ್ಕವರು. ಅಶೋಕ್ ಮೇಲೆ ನನಗೆ ಪ್ರೀತಿ, ವಿಶ್ವಾಸ ಇದೆ. ನಮ್ಮವರಿಂದಲೇ ನೋವಾದಾಗ ನನ್ನ ಭಾವನೆ ಹೇಳಿಕೊಂಡಿದ್ದೇನೆ. ಸಂಕ್ರಾಂತಿ ಬಳಿಕ ಎಲ್ಲವೂ ಸುಖಾಂತ್ಯವಾಗಬೇಕು ಎಂದರು.

ಇನ್ನು ವಿ ಸೋಮಣ್ಣ ಜನವರಿ 8ರಂದು ನವದೆಹಲಿಗೆ ತೆರಳಲಿದ್ದಾರೆ. 12ರ ವರೆಗೂ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಈ ಅವಧಿಯಲ್ಲಿ ವರಿಷ್ಠರಿಗೆ ಭೇಟಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ವಿಧಾನಸಭೆ ಚುನಾವಣೆಯಲ್ಲಿ ವಿ ಸೋಮಣ್ಣ ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಈ ಎರಡೂ ಕ್ಷೇತ್ರಗಳಲ್ಲಿ ವಿ ಸೋಮಣ್ಣ ಸೋತಿದ್ದಾರೆ. ಈ ಸೋಲಿನ ಬಳಿಕ ಸ್ವಪಕ್ಷದವರ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ. ಇದೀಗ ತಮ್ಮ ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ನನ್ನ ಸೋಲಿಗೆ ಯಾರು ಯಾರು ಕಾರಣ ಅಂತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಗೊತ್ತಿದೆ. ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳದಿದ್ದರೆ ನಾನು ಸಿಡಿದೇಳಬೇಕಾಗುತ್ತದೆ ಎಂದು ಮಾಜಿ ಸಚಿವ ವಿ ಸೋಮಣ್ಣ ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರಿಪಡಿಸುವುದು, ಬಿಡುವುದು ಅವರಿಗೆ ಸೇರಿದ್ದು ಎಂದರು.

ಲೋಕಸಭೆ ಚುನಾವಣೆ ಇರುವುದರಿಂದ ಕೆಲ ವಿಚಾರ ಮಾತನಾಡಲ್ಲ. ನಮ್ಮಂಥವರಿಗೆ ಏನು ಅನಾನುಕೂಲ ಎಂಬ ಮಾಹಿತಿ ಅವರಿಗೆ ಇದೆ. ಅವರಿಗೇ ಅಂಟಿಕೊಂಡು ಹೋಗ್ತೇನೆ ಅಂದರೇ ಬೇರೆ ಮಾತಾಡಬೇಕಾಗುತ್ತೆ.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಇನ್ನೂ ಯುವಕ. ನೀನು ಬೆಳೆಯಬೇಕು, ರಾಜ್ಯದಲ್ಲಿ ದೊಡ್ಡ ನಾಯಕರು ಅಂತ ಇದ್ದಾರೆ. ಸೋಲಿಗೆ ಕಾರಣರಾದ ಮನೆಹಾಳರನ್ನು ಜೊತೆಯಲ್ಲಿ ಇಟ್ಟುಕೊಳ್ಳಬಾರದು ಎಂದು ಕಿವಿ ಮಾತು ಹೇಳಿದರು.

Recent Articles

spot_img

Related Stories

Share via
Copy link
Powered by Social Snap