ಬೆಂಗಳೂರು :
ರಾಜ್ಯದಲ್ಲಿ ಇಂದು(ಬುಧವಾರ, ಮೇ. 05) ಒಂದು ಕೋಟಿ ಡೋಸ್ ಲಸಿಕಾ ವಿತರಣೆ ಪೂರೈಸಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಕುರಿತಾಗಿ ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ಕಂಚಿಕೊಂಡಿರುವ ಸುಧಾಕರ್, ಕರ್ನಾಟಕ ಇಂದು 1 ಕೋಟಿ ಡೋಸ್ ಲಸಿಕೆ ವಿತರಣೆ ಪೂರೈಸಿದೆ.
ಈವರೆಗೂ ಕೇಂದ್ರದಿಂದ ರಾಜ್ಯಕ್ಕೆ 1,05,49,970 ಡೋಸ್ ಲಸಿಕೆ ಲಭ್ಯವಾಗಿದ್ದು, ರಾಜ್ಯ ಸರ್ಕಾರ 3 ಲಕ್ಷ ಡೋಸ್ ತರಿಸಿಕೊಂಡಿದೆ. ಕೊರೊನಾ ವಿರುದ್ಧದ ಈ ಸಮರದಲ್ಲಿ ಲಸಿಕೆ ನಮ್ಮ ಅತ್ಯಂತ ದೊಡ್ಡ ಅಸ್ತ್ರವಾಗಿದ್ದು ಪ್ರತಿಯೊಬ್ಬರಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಬರೆದುಕೊಂಡಿದ್ದಾರೆ.
