ವಂದೇ ಭಾರತ್ ರೈಲು ಸೇವೆ ವಿಸ್ತರಣೆ: ಕೇಂದ್ರಕ್ಕೆ ಸಂಸದ ಜಗದೀಶ್ ಶೆಟ್ಟರ್ ಮನವಿ

ಬೆಳಗಾವಿ:

   ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಸಂಸದ ಜಗದೀಶ್ ಶೆಟ್ಟರ್ ಅವರು ಮನವಿ ಮಾಡಿಕೊಂಡಿದ್ದಾರೆ.

   ಈ ಕುರಿತು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿರುವ ಶೆಟ್ಟರ್ ಅವರು, ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕೆಂಬ ಜನರ ಬೇಡಿಕೆ ಬಹಳ ದಿನಗಳಿಂದ ಇದೆ. ಈ ಹಿಂದೆ ಬೆಳಗಾವಿಯವರೆಗೆ ಕೈಗೊಂಡಿದ್ದ ರೈಲಿನ ಪ್ರಾಯೋಗಿಕ ಸಂಚಾರವೂ ಯಶಸ್ವಿಯಾಗಿತ್ತು. ಆದರೆ, ತಾಂತ್ರಿಕ ಕಾರಣ ನೀಡಿದ ರೈಲ್ವೆ ಅಧಿಕಾರಿಗಳು ಸಂಚಾರ ಆರಂಭಿಸಿಲ್ಲ. ಈ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

   ಪುಣೆ-ಬೆಳಗಾವಿ-ಹುಬ್ಬಳ್ಳಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಪ್ರಾರಂಭಿಸಬೇಕು ಎಂಬ ನಮ್ಮ ಮನವಿಗೆ ಸ್ಪಂದಿಸಿ, ನಮ್ಮ ಬೆಳಗಾವಿ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ನಾಳೆ ಸೆಪ್ಟೆಂಬರ್ 16 ರಂದು ಪುಣೆ-ಬೆಳಗಾವಿ-ಹುಬ್ಬಳ್ಳಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರಿಂದ ಚಾಲನೆ ದೊರೆಯಲಿರುವುದು ಅತ್ಯಂತ ಸಂತಸದ ಸಂಗತಿ. ಇದಕ್ಕಾಗಿ ನಿಮಗೆ ತುಂಬು ಹೃದಯದ ಧನ್ಯವಾದಗಳು.

   ಇದೀಗ ನಮ್ಮ ಕ್ಷೇತ್ರದ ಜನರ ಮತ್ತೊಂದು ಮಹತ್ವದ ಬೇಡಿಕೆಯಾದ ಬೆಂಗಳೂರು -ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಿಸಲು ತಮ್ಮಲ್ಲಿ ಮನವಿ. ಈ ಹಿಂದೆ ಈ ರೈಲನ್ನು ಬೆಳಗಾವಿಯ ವರೆಗೆ ಟ್ರಯಲ್ ರನ್ ಮಾಡಿದಾಗ ಅದು ಯಶಸ್ವಿಯಾಗಿತ್ತು. ತಾಂತ್ರಿಕ ಕಾರಣಗಳನ್ನು ನೀಡಿದ ರೈಲ್ವೆ ಅಧಿಕಾರಿಗಳು ಹೊಸ ವೇಳಾಪಟ್ಟಿಯನ್ನು ಆರಂಭಿಸುವ ಪ್ರಕ್ರಿಯೆಯನ್ನು ನಿಲ್ಲಿಸಿದ್ದಾರೆ. ಈ ಎಲ್ಲಾ ಮಾಹಿತಿಗಳನ್ನು ನಾನು ಈಗಾಗಲೇ ನಿಮ್ಮೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಸಂದರ್ಭದಲ್ಲಿ ತಿಳಿಸಿದ್ದೇನೆ.

   ಕ್ಷೇತ್ರದ ಜನರ ಬೆಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ಸೇವೆಗಳನ್ನು ಬೆಳಗಾವಿವರೆಗೆ ವಿಸ್ತರಿಸಲು ತಾವು ಮನವಿಯನ್ನು ಪರಿಶೀಲಿಸುವಂತೆ ನಾನು ಮತ್ತೊಮ್ಮೆ ವಿನಂತಿಸುತ್ತೇನೆ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ

Recent Articles

spot_img

Related Stories

Share via
Copy link
Powered by Social Snap