ಬೆಳಗಾವಿಗೆ ವಂದೇಭಾರತ್‌ ವಿಸ್ಥರಣೆ….!

ನವದೆಹಲಿ

    ಬೆಂಗಳೂರು-ಧಾರವಾಡ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು  ಬೆಳಗಾವಿಯವರೆಗೆ ವಿಸ್ತರಿಸಿ, ರೈಲ್ವೆ ಸಚಿವಾಲಯ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಮಾಡಿದ್ದ ಮನವಿ ಮೇರೆಗೆ  ಆದೇಶ ಹೊರಡಿಸಿದೆ.

    ಈ ಕುರಿತ ಆದೇಶವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲನ್ನು ಬೆಂಗಳೂರು-ಧಾರವಾಡ ದಿಂದ ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿರುವುದಾಗಿ ತಿಳಿಸಿದ್ದಾರೆ. 

    ಬೆಂಗಳೂರು-ಬೆಳಗಾವಿ ರೈಲು ಸಂಖ್ಯೆ  (20661) ಬೆಳ್ಳಿಗೆ 05.45 ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು ಮಧ್ಯಾಹ್ನ 01.30 ಕ್ಕೆ ಬೆಳಗಾವಿ ತಲುಪಲಿದೆ.

     ಹುಬ್ಬಳ್ಳಿ -ಧಾರವಾಡ ನಡುವೆ ಜೂನ್‌ 27ರಿಂದ ವಂದೇ ಭಾರತ್‌ ರೈಲು ಸಂಚಾರ ಪ್ರಾರಂಭಗೊಂಡಿತ್ತು. ಆದರೆ ಬೆಳಗಾವಿಯವರೆಗೆ ವಿಸ್ತರಿಸುವ ಬೇಡಿಕೆಗೆ ಸ್ಪಂದನೆ ಸಿಕ್ಕಿರಲಿಲ್ಲ. ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರ ಬೇಡಿಕೆಗೆ ಮಣಿದ ರೈಲ್ವೆ ಇಲಾಖೆ ಕೊನೆಗೂ ಬೆಳಗಾವಿಗೆ ಸಂಚಾರ ಪ್ರಾರಂಭಿಸುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link