ಬೆಂಗಳೂರು
ನವೆಂಬರ್‌ನಲ್ಲಿ ಪ್ರಾರಂಭವಾದ ಮೈಸೂರು – ಚೆನ್ನೈ ಸೆಂಟ್ರಲ್ ಸ್ಟೇಷನ್ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ವೇಗವನ್ನು ಇನ್ನು ಹೆಚ್ಚು ಮಾಡುವ ಉದ್ದೇಶ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ . ಸದ್ಯ ರೈಲು ಸೇವೆಗೆ ಉತ್ತಮವಾದ ಪ್ರತಿಕ್ರಿಯೆ ಸಿಕ್ಕಿದ್ದು
ವಂದೇ ಭಾರತ್ ರೈಲು ಬೆಂಗಳೂರು ಮೂಲಕ ಸಾಗುತ್ತದೆ. ನಗರದಲ್ಲಿ ಕೆ. ಎಸ್. ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ಈ ರೈಲು ನಿಲುಗಡೆ ಇದೆ. ಆದ್ದರಿಂದ ಬೆಂಗಳೂರು-ಚೆನ್ನೈ ಪ್ರಯಾಣಿಕರಿಗೂ ಸಹಕಾರಿಯಾಗಿದೆ. ಈ ರೈಲು ಕೈಗಾರಿಕಾ ತಾಣ ಚೆನ್ನೈ ಮತ್ತು ಸಾಫ್ಟ್‌ವೇರ್ ನವೋದ್ಯಮ ತಂತ್ರಜ್ಞಾನದ ತಾಣವಾದ ಬೆಂಗಳೂರು ಸಂಪರ್ಕಿಸುತ್ತದೆ.
ಬೆಂಗಳೂರು ವಲಯದ ಮ್ಯಾನೇಜರ್ ಶ್ಯಾಮ್ ಸಿಂಗ್ ಕಾಮಗಾರಿಗಳ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. “ನಾವು ವಿವಿಧ ಹಂತದಲ್ಲಿ ಕಾಮಗಾರಿಗಳನ್ನು ಕೈಗೊಂಡಿದ್ದೇವೆ. ಈಗ ರೈಲು ಕೆ. ಆರ್. ಪುರ-ಜೋಲಾರಪಟ್ಟಿ ನಡುವೆ ಗಂಟೆಗೆ 110 ಕಿ. ಮೀ. ವೇಗದಲ್ಲಿ ಸಂಚಾರ ನಡೆಸುತ್ತಿದೆ. ಹಳಿ ಸೇರಿದಂತೆ ಈಗ ಕೈಗೊಂಡಿರುವ ಕಾಮಗಾರಿ ಪೂರ್ಣಗೊಂಡ ಬಳಿಕ ರೈಲು ಗಂಟೆಗೆ 130 ಕಿ. ಮೀ. ವೇಗದಲ್ಲಿ ಸಂಚಾರ ನಡೆಸಲು ಸಾಧ್ಯವಾಗುತ್ತದೆ” ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ