ವರದಕ್ಷಿಣೆಗಾಗಿ ಮಹಿಳೆಯ ಕೂದಲು ಹಿಡಿದು, ಒದ್ದು ಮನಸೋ ಇಚ್ಛೆ ಹಲ್ಲೆ!

ಬೆಂಗಳೂರು:

   ರಾಜ್ಯದಲ್ಲಿ ಅಮಾನವೀಯ ಘಟನೆಯೊಂದು   ನಡೆದಿದೆ. ವರದಕ್ಷಿಣೆಗಾಗಿ ಮಹಿಳೆಗೆ ಕಿರುಕುಳ ನೀಡಿರುವ ಗಂಡನ ಮನೆಯರು, ಆಕೆಯ ಕೂದಲು ಹಿಡಿದು ಎಳೆದಾಡಿ ಕಾಲಿನಿಂದ ಒದ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಆನೇಕಲ್‌ನ ನಾರಾಯಣಪುರದಲ್ಲಿ ಈ ನಡೆದಿದೆ. ಆನೇಕಲ್ ಪಟ್ಟಣದ ನಾರಾಯಣಪುರದಲ್ಲಿ ಪತಿ ಅರುಣ್, ಅತ್ತೆ ಪ್ರಭಾವತಿ, ಮಾವ ಚೌಡಪ್ಪ ಮೂವರು ಸೇರಿಕೊಂಡು ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ.

   ಅರುಣ್ ಪತ್ನಿ ಶ್ರೀಲಜಾ ಮೇಲೆ ಗಜೇಂದ್ರ, ನರಸಿಂಹಮೂರ್ತಿ, ಲಕ್ಷ್ಮಿ, ಚೌಡಪ್ಪ ಅವರು ಹಲ್ಲೆ ಮಾಡಿ ಕಾಲಿನಿಂದ ಒದ್ದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. 5 ವರ್ಷಗಳ ಹಿಂದೆ ಅರುಣ್ ಜತೆ ಶ್ರೀಲಜಾ ಮದುವೆಯಾಗಿದ್ದರು. ದಂಪತಿಗೆ ನಾಲ್ಕು ವರ್ಷದ ಹೆಣ್ಣು ಮಗು ಕೂಡ ಇದೆ.

  ಮದುವೆಯಾದ ಮೇಲೂ ಪತಿ ಹಾಗೂ ಪತಿಯ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಅಲ್ಲದೆ ಗಂಡ ಶ್ರೀಲಜಾ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ. ಈ ವೇಳೆ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯಿತಿ ಕೂಡ ನಡೆದಿತ್ತು. ಕಳೆದ ಒಂದು ವಾರದ ಹಿಂದೆ ಶ್ರೀಲಜಾ ತವರು ಮನೆಗೆ ತೆರಳಿದ್ದರು. ಇದೀಗ ಮನೆಗೆ ಬಂದ ವೇಳೆ ಮನೆಗೆ ಸೇರಿಸಿದೆ ರಸ್ತೆ ಮೇಲು ಕೂದಲು ಹಿಡಿದು ಎಳೆದಾಡಿ, ಕಾಲಿನಿಂದ ಒದ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಈ ಕುರಿತು ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Recent Articles

spot_img

Related Stories

Share via
Copy link