೧೧ ಮಂದಿ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ : ವೀರಭದ್ರಪ್ಪ

ನಾಯಕನಹಟ್ಟಿ :

    ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ೧೧ ಮಂದಿ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ, ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ತಕ್ಷಣವೇ ರಾಜೀನಾಮೆ ನೀಡಬೇಕೆಂದು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಜೆ.ಡಿ.ಎಸ್ ಪರಾಜಿತ ಅಭ್ಯರ್ಥಿ ವೀರಭದ್ರಪ್ಪ ಒತ್ತಾಯ ಮಾಡಿದ್ದಾರೆ.

   ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೂರಿದರು.ಗ್ಯಾರೆಂಟಿ ಯೋಜನೆಗಳಿಗೆ ಗಮನ ಹರಿಸುತ್ತಿರುವ ರಾಜ್ಯ ಸರ್ಕಾರ ಅಭಿವೃದ್ಧಿಯನ್ನು ಮೆರೆತಿದೆ. ಅಧಿಕಾರಕ್ಕೆ ಬಂದು 2 ವರ್ಷ ಕಳೆದರು ಕಾಂಗ್ರೆಸ್ ರಾಜ್ಯದಲ್ಲಿ ಅಭಿವೃದ್ಧಿಯನ್ನು ನಿರ್ಲಕ್ಷಿಸಿದೆ ಮತ್ತು ದಿವಾಳಿಯತ್ತ ಸಾಗುತ್ತಿದೆ.  ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿರುವ 187 ಕೋಟಿ ರೂ. ಹಣ ದುರ್ಬಳಕೆ ಮಾಡಿಕೊಂಡಿದೆ. ಬಳ್ಳಾರಿ ಶಾಸಕ ನಾಗೇಂದ್ರರವರನ್ನು ಜೈಲಿಗೆ ಕಳುಹಿಸಿದ್ದೆ ರಾಜ್ಯ ಸರ್ಕಾರ.ಮಾಜಿ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ರೈತರ ಸಾಲಮನ್ನ ಮಾಡಿದರು.ರಾಜ್ಯದಲ್ಲಿ ಲಾಟರಿ ಹಾಗೂ ಸಾರಾಯಿ ನಿಷೇಧ ಮಾಡುವುದರ ಮೂಲಕ ಬಡ ಮತ್ತು ಸಾಮಾನ್ಯ ವರ್ಗದ ಕುಟುಂಬಗಳಿಗೆ ಶಾಶ್ವತವಾಗಿ ನೆಮ್ಮದಿ ದೊರಕಿಸಿಕೊಟ್ಟರು.ಹಲವಾರು ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಎಲ್ಲಾ ವರ್ಗದವರಿಗೂ ಅನುಕೂಲ ಮಾಡಿಕೊಟ್ಟರು.   ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನ ನರೇಂದ್ರ ಮೋದಿಯವರು ದೇಶದ ರಕ್ಷಣೆಗಾಗಿ 24 ಗಂಟೆಯೂ ಕೆಲಸ ಮಾಡುತ್ತಿದ್ದಾರೆ ಎಂದರು.ಜೆ.ಡಿ.ಎಸ್. ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ 25 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದರು. ದೇಶ ರಾಜ್ಯದಲ್ಲಿ ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ನಾಯಕರೆೆಂದರೆ ಅದು ಕುಮಾರಸ್ವಾಮಿಯವರು ಎಂದು ಹೇಳಿದರು.

Recent Articles

spot_img

Related Stories

Share via
Copy link