ನವದೆಹಲಿ:
ಬಿಜೆಪಿಯು ಮಹಾರಾಷ್ಟ್ರದ ರಾಜ್ಯಪಾಲ, 68 ವರ್ಷದ ಸಿ.ಪಿ. ರಾಧಾಕೃಷ್ಣನ್ ಅವರನ್ನು ಎನ್‌ಡಿಎ ಮೈತ್ರಿಕೂಟ ಉಪ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ತಮಿಳುನಾಡು ಮೂಲದ ರಾಧಾಕೃಷ್ಣನ್ ಬಿಜೆಪಿಯ ಪ್ರಮುಖ ನಾಯಕರಲ್ಲಿ ಒಬ್ಬರು. ಅವರು ಈ ಹಿಂದೆ ಜಾರ್ಖಂಡ್‌ನ ರಾಜ್ಯಪಾಲರಾಗಿದ್ದರು. ಅಲ್ಲದೆ ಕೊಯಂಬತ್ತೂರಿನಿಂದ 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಭಾನುವಾರ ದೆಹಲಿಯಲ್ಲಿ (ಆಗಸ್ಟ್ 17) ನಡೆದ ಬಿಜೆಪಿಯ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಿ.ಪಿ. ರಾಧಾಕೃಷ್ಣನ್ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ ಭಾನುವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು. ಮುಂದಿನ ಉಪರಾಷ್ಟ್ರಪತಿಗಳು ಸರ್ವಾನುಮತದಿಂದ ಆಯ್ಕೆಯಾಗಬೇಕೆಂದು ನಾವು ಬಯಸುತ್ತೇವೆ. ನಾವು ವಿರೋಧ ಪಕ್ಷದ ನಾಯಕರನ್ನು ಸಂಪರ್ಕಿಸಿದ್ದೇವೆ ಎಂದು ಅವರು ತಿಳಿಸಿದ್ದರು.
