ತುಮಕೂರು:
ತುಮಕೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಇಬ್ಬರು ದಲಿತ ಯುವಕರಿಗೆ ಕಿರುಕುಳ ನೀಡಿ ಹತ್ಯೆ ಮಾಡಲಾಗಿದೆ. ಮೃತರನ್ನು ತುಮಕೂರಿನ ಗಿರೀಶ್ ಮೂಡಲ ಗಿರಿಯಪ್ಪ ಮತ್ತು ಮಂಚಲದೊರೆ ನಿವಾಸಿ ಗಿರೀಶ್ (32) ಎಂದು ಗುರುತಿಸಲಾಗಿದೆ.
ಮೂಡಲಗಿರಿಯಪ್ಪನ ಮೃತದೇಹ ಹೊಲದಲ್ಲಿ ಪತ್ತೆಯಾಗಿದ್ದರೆ, ಮತ್ತೋರ್ವನ ಮೃತದೇಹ ಕೆರೆಯೊಂದರಲ್ಲಿ ತೇಲುವ ಸ್ಥಿತಿಯಲ್ಲಿ ಕಂಡುಬಂದಿದೆ.ಗುರುವಾರ ರಾತ್ರಿ ಗ್ರಾಮಸ್ಥರು ಸ್ಥಳೀಯ ದೇವರ ಉತ್ಸವ ನಡೆಸುತ್ತಿದ್ದಾಗ ಪ್ರಕರಣದ ಪ್ರಮುಖ ಆರೋಪಿ ನಂದೀಶ್ ಗಿರೀಶ್ ಮನೆಗೆ ಹೋಗಿ, ಮನವೊಲಿಸಿ ಕರೆದುಕೊಂಡು ಬಂದಿದ್ದಾನೆ.
ನನ್ನ ತೋಳಿಗೆ ಭಾರತದ ಕೋವಿಡ್ ಲಸಿಕೆ ಹಾಕಲಾಗಿದೆ, ಭಾರತಕ್ಕೆ ಧನ್ಯವಾದ: ಬ್ರಿಟನ್ ಪ್ರಧಾನಿ
ನಂತರ ತನ್ನ ಸ್ನೇಹಿತರು ಕಾಯುತ್ತಿದ್ದ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದು, ಹಂತಕರು ಆತನಿಗೆ ಒಣಗಿದ ತೆಂಗಿನ ಮರದ ಗರಿಗಳಿಗೆ ಬೆಂಕಿ ಹಚ್ಚಿ ದಲಿತ ಯುವಕರಿಗೆ ಸುಡುವ ಮೂಲಕ ಕಿರುಕುಳ ನೀಡಿದ್ದಾರೆ. ತದನಂತರ ಕ್ಲಬ್ ಗೆ ಕರೆದೊಯ್ಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗಿರೀಶ್ ಮೂಡಲಗಿರಿಯಪ್ಪ ಸ್ಥಳದಲ್ಲಿಯೇ ಮೃತಪಟ್ಟರೆ, ಮತ್ತೋರ್ವ ಗಿರೀಶ್ ಮೃತದೇಹವನ್ನು ಕೆರೆಯೊಂದಕ್ಕೆ ಎಸೆಯಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಈ ಬರ್ಬರ ಹತ್ಯೆಯಿಂದಾಗಿ ಊರಿನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಕೆಜಿಎಫ್ ಚಾಪ್ಟರ್ 2 ವಿಶೇಷ ದಾಖಲೆ: ಒಂದೇ ವಾರದಲ್ಲಿ 800 ಕೋಟಿ ರೂಪಾಯಿ ಕಲೆಕ್ಷನ್
ಈ ದಾಳಿಗೆ ಕಾರಣ ತಿಳಿದುಬಂದಿಲ್ಲ. ಮೊಬೈಕ್ ಕಳ್ಳತನ ಮತ್ತು ಅಡಿಕೆ ಕಳ್ಳತನಕ್ಕೆ ಸಂಬಂಧಿಸಿದಂತೆ ದಲಿತ ಯುವಕರು ಹಂತಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು ಎನ್ನಲಾಗಿದೆ. ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಅವರು ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಎಲ್ಲಾ ಆರೋಪಿಗಳನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಎಸ್ ಪಿ ರಾಹುಲ್ ಕುಮಾರ್ ಶಹಾಪೂರ್ ವಾಡ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
ಆರೋಪಿಗಳ ಪತ್ತೆಗಾಗಿ ತಂಡವೊಂದನ್ನು ಡಿವೈಎಸ್ಪಿ ನೇತೃತ್ವದಲ್ಲಿ ರಚಿಸಲಾಗಿದೆ. ಈ ಮಧ್ಯೆ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘಟನೆಗಳು ಎಸ್ ಪಿಗೆ ಒತ್ತಾಯಿಸಿವೆ. ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್ ಗಳಡಿಯಲ್ಲಿ ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ