ಬೆಂಗಳೂರು :
ವಿಧಾನ ಪರಿಷತ್ ಉಪಸಭಾಪತಿಯಾಗಿ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.
ಉಪಸಭಾಪತಿ ಚುನಾವಣೆಗೆ ಬಿಜೆಪಿಯಿಂದ ಎಂ.ಕೆ.ಪ್ರಾಣೇಶ್ ಮತ್ತು ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧಿಸಿದ್ದರು. ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಪರ 41 ಮತಗಳನ್ನು ಚಲಾವಣೆಯಾಗಿದ್ದರೆ. ವಿರುದ್ಧವಾಗಿ 24 ಮತಗಳು ಚಲಾವಣೆಯಾಗಿವೆ.
ಈಮೂಲಕ ಗೆಲುವು ಸಾಧಿಸಿರುವ ಎಂ.ಕೆ.ಪ್ರಾಣೇಶ್ ಅವರು ವಿಧಾನ ಪರಿಷತ್ ನ ಉಪಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ವಿಧಾನಪರಿಷತ್ ಉಪಸಭಾಪತಿಯಾಗಿ ಆಯ್ಕೆಯಾದ ಎಂ.ಕೆ. ಪ್ರಾಣೇಶ್ ಗೆ ಆಡಳಿತ ಪಕ್ಷದ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ