ಬೆಂಗಳೂರು :
ವಿಧಾನಸಭಾ ಕಲಾಪದಲ್ಲಿ ಇಂದು ಶರ್ಟ್ ಬಿಚ್ಚಿ ಇರಿಸು ಮುರಿಸಾಗುವಂಥ ಸ್ಥಿತಿ ನಿರ್ಮಾಣ ಮಾಡಿದ ಕಾಂಗ್ರೆಸ್ ಶಾಸಕ ಸಂಗಮೇಶ್ ಅವರನ್ನು ಸ್ಪೀಕರ್ ರಮೇಶ್ ಕುಮಾರ್ ಒಂದು ವಾರ ಸದನದಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ವಿಧಾನಸಭೆಯಲ್ಲಿ ಒಂದು ದೇಶ ಒಂದು ಚುನಾವಣೆ ಕುರಿತಾಗಿ ಚರ್ಚೆ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಭದ್ರಾವತಿ ಶಾಸಕ ಸಂಗಮೇಶ್, ಸಿಎಂ ಬಿಎಸ್ ವೈ ವಿರುದ್ದ ವೈಯಕ್ತಿಕ ವಿಚಾರಗಳ ಬಗ್ಗೆ ಆರೋಪ ಮಾಡಿದರು. ಪ್ರತಿಭಟನೆ ಮಾಡುವ ಭರದಲ್ಲಿ ಸಂಗಮೇಶ್ ಅಂಗಿ ತೆಗೆದರು.
ಅವರ ನಡೆಯನ್ನು ಸದನ ಒಪ್ಪುವುದಿಲ್ಲ ಎಂಬುದಾಗಿ ಸದನದಲ್ಲೇ ವಾರ್ನ್ ಮಾಡಿದ್ದಂತ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಅವರನ್ನು ಸದನದಿಂದ ಅಮಾನತುಗೊಳಿಸುವಂತ ನಿರ್ಧಾರವನ್ನು ಕೈಗೊಂಡಿದ್ದರು. ಇಂತಹ ನಿರ್ಧಾರಕ್ಕೆ ಆಡಳಿತ ಪಕ್ಷ ಒಪ್ಪಿಗೆ ಸೂಚಿಸಿರುವ ಹಿನ್ನಲೆಯಲ್ಲಿ ಶಾಸಕ ಬಿ.ಕೆ.ಸಂಗಮೇಶ್ ಅವರನ್ನು ಸದನದಿಂದ ಒಂದು ವಾರಗಳ ಕಾಲ ಅಮಾನತುಗೊಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ