ರಿಕ್ಷಾಗೆ ಪಿಕ್‌ ಅಪ್‌ ಡಿಕ್ಕಿ : ವಿದ್ಯಾರ್ಥಿನಿ ಸಾವು….!

ದೇರಳಕಟ್ಟೆ:

    ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 4ರ ಹರೆಯದ ವಿದ್ಯಾಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಸಂಭವಿಸಿದೆ.

    ಬಡಕಬೈಲು ನಿವಾಸಿ ಮಹಮ್ಮದ್‌ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11 ) ಮೃತ ವಿದ್ಯಾರ್ಥಿನಿ.
ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ದಿಂದ ಬಂದ ಪಿಕಪ್‌ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ರಿಕ್ಷಾ ಪಲ್ಟಿ ಯಾಗಿ ಆಯಿಷಾ ವಹಿಬಾ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾಳೆ.

   ರಿಕ್ಷಾದಲ್ಲಿದ್ದ ಇತರೆ ಮೂವರು ವಿದ್ಯಾರ್ಥಿಗಳು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ. ರಿಕ್ಷಾ ಚಾಲಕನಿಗೂ ಗಾಯವಾಗಿದೆ. ಗಾಯಾಳುಗಳನ್ನು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿನಿ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ದೇರಳಕಟ್ಟೆ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರಜೆ ಸಾರಲಾಗಿದೆ.

Recent Articles

spot_img

Related Stories

Share via
Copy link