ಮಂಗಳೂರು:
ಮಂಗಳೂರಿನಲ್ಲಿ ಸಂಭವಿಸಿದ ದುರಂತದಲ್ಲಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ. ಅಪಾರ್ಟ್ಮೆಂಟ್ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿರುವ ಘಟನೆ ಮಂಗಳೂರು ಬಳಿಯ ಕುತ್ತಾರಿನಲ್ಲಿ ನಡೆದಿದೆ. ಕುತ್ತಾರು ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಈ ಘಟನೆ ಸಂಭವಿಸಿದ್ದು, ಕಟ್ಟಡದಿಂದ ಬಿದ್ದು ವೈದ್ಯ ದಂಪತಿಯ ಪುತ್ರಿ ಹಿಬಾ ಐಮನ್ (15) ಸಾವನ್ನಪ್ಪಿದ್ದಾರೆ.
ನಿನ್ನೆ ರಾತ್ರಿ ಬಟ್ಟೆ ಒಣಗಿಸಲೆಂದು ಹೋಗಿದ್ದ ಹಿಬಾ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ವೈದ್ಯರುಗಳಾದ ಡಾ.ಮುಮ್ತಾಜ್ ಅಹ್ಮದ್ ದಂಪತಿ ಅಪಾರ್ಟ್ ಮೆಂಟ್ನ 12ನೇ ಮಹಡಿಯಲ್ಲಿ ವಾಸವಾಗಿದ್ದಾರೆ. ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
