ಅಯೋಧ್ಯೆ:
ಶ್ರೀರಾಮನ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಔಪಚಾರಿಕ ಆಹ್ವಾನವನ್ನು ಕಳುಹಿಸಿದೆ.
ಈ ಸಮಾರಂಭವು ಮುಂದಿನ ವರ್ಷದ ಜನವರಿ ತಿಂಗಳಲ್ಲಿ ನಡೆಯಲಿದೆ ಮತ್ತು ಸುಮಾರು 10,000 ಅತಿಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾತನಾಡಿ, ನಾವು ಜನವರಿ 15 ಮತ್ತು 24 ರ ನಡುವೆ ಕಾರ್ಯಕ್ರಮವನ್ನು ನಡೆಸಲು ದಿನಾಂಕಗಳನ್ನು ಗೊತ್ತು ಮಾಡಿದ್ದೇವೆ. ಆದರೂ, ಈ ಪೈಕಿ ನಿಖರವಾದ ದಿನಾಂಕವನ್ನು ಪ್ರಧಾನಿ ಮೋದಿ ನಿರ್ಧರಿಸಲಿದ್ದಾರೆ ಎಂದರು.
