ಬೆಂಗಳೂರು:
ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಕೋಟಿ ಜನರನ್ನು ತಲುಪುವ ಗುರಿಯೊಂದಿಗೆ ಬಿಜೆಪಿ ಮಾರ್ಚ್ 1 ರಿಂದ ರಾಜ್ಯಾದ್ಯಂತ ನಾಲ್ಕು ದಿಕ್ಕುಗಳಿಂದ ವಿಜಯ ಸಂಕಲ್ಪ ಯಾತ್ರೆಯನ್ನು ಪ್ರಾರಂಭಿಸಲು ಸಕಲ ಸನ್ನದ್ದವಾಗಿದೆ.
ಯಾತ್ರೆಯಲ್ಲಿ ರಾಜ್ಯ ಮತ್ತು ಕೇಂದ್ರದ ಹಿರಿಯ ನಾಯಕರ ನೇತೃತ್ವದಲ್ಲಿ ನಾಲ್ಕು ತಂಡಗಳು 150 ಕ್ಕೂ ಹೆಚ್ಚು ರೋಡ್ ಷೋ ಮತ್ತು ಸುಮಾರು 8,000 ಕಿ.ಮೀ. ದೂರ ಕ್ರಮಿಸುವ ನಿರೀಕ್ಷೆಯಿದೆ. ಮಾರ್ಚ್ 20 ರಂದು ಯಾತ್ರೆ ಮುಕ್ತಾಯವಾಗಲಿದ್ದು, ಮಾರ್ಚ್ 25 ರಂದು ದಾವಣಗೆರೆಯಲ್ಲಿ ನಡೆಯಲಿರುವ ಮೆಗಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ 10 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ.
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನೀರಾವರಿ ಸಚಿವ ಗೋವಿಂದ ಕಾರಜೋಳ ಮತ್ತು ಕಂದಾಯ ಸಚಿವ ಆರ್.ಅಶೋಕ ಚಾಮರಾಜನಗರ, ಬೆಳಗಾವಿ, ಬೀದರ್ ಮತ್ತು ಬೆಂಗಳೂರಿನಿಂದ ಪ್ರತಿ ತಂಡವನ್ನು ಮುನ್ನಡೆಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ