ಸಮಾಜಘಾತುಕ ದುಷ್ಟರ ವಿರುದ್ಧ ಕಠಿಣ ಕ್ರಮ ಜರುಗಿಸಿ:ವಿಜಯೇಂದ್ರ

ಬೆಂಗಳೂರು:

   ಶಾಂತಿ-ಸುವ್ಯವಸ್ಥೆಗೆ ಹೆಸರಾದ ಮೈಸೂರು ಕೋಮು ದಳ್ಳುರಿಗೆ ಸಿಲುಕುವ ಅಪಾಯಕ್ಕೆ ತಲುಪಿದರೆ ಕಾಂಗ್ರೆಸ್ ಸರ್ಕಾರವೇ ಅದರ ಹೊಣೆ ಹೊರಬೇಕಾದೀತು? ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಚ್ಚರಿಸಿದ್ದಾರೆ.ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಮೈಸೂರಿನ ಉದಯಗಿರಿಯಲ್ಲಿ ನಡೆದಿರುವ ಪುಂಡರ ಗುಂಪಿನ ಅಟ್ಟಹಾಸ ಕಾನೂನು ಸುವ್ಯವಸ್ಥೆಯನ್ನೇ ಮೂಲೋತ್ಪಾಟನೆ ಮಾಡುವ ವಿದ್ವಾಂಸಕ ಶಕ್ತಿಗಳ ಪ್ರದರ್ಶನವಾಗಿದೆ. ಅಲ್ಪಸಂಖ್ಯಾತರ ಓಲೈಕೆ ಕಾಂಗ್ರೆಸ್ ಸರ್ಕಾರದ ಆದ್ಯತೆ ಎಂಬಂತೆ ನಡೆದುಕೊಳ್ಳುತ್ತಿರುವ ಸರ್ಕಾರದ ಧೋರಣೆ ಮತೀಯವಾದಿ ಪುಂಡ ಪೋಕರಿಗಳಿಗೆ ರಹದಾರಿ ಕೊಟ್ಟಂತಾಗಿದೆ.

   ಕೋಮುವಾದಿ ರಕ್ಕಸ ವರ್ತನೆಯನ್ನು ಸಮರ್ಥಿಸುವ ರೀತಿಯಲ್ಲಿ ಮಾತನಾಡಿರುವ ಸಚಿವ ಕೆ ರಾಜಣ್ಣ ಅವರು ಪೊಲೀಸರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಪರಿಯಲ್ಲಿ ಘಟನೆಯನ್ನು ವ್ಯಾಖ್ಯಾನಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಎನ್ ಆರ್ ಕ್ಷೇತ್ರದ ಉದಯಗಿರಿ ಠಾಣಾ ವ್ಯಾಪ್ತಿ ಹಿಂದಿನಿಂದಲೂ ಮುಸ್ಲಿಂ ಸಮುದಾಯದ ಬಾಹುಳ್ಯದಲ್ಲಿದ್ದು ನಿರಂತರವಾಗಿ ಮತೀಯ ದುಷ್ಕರ್ಮಿಗಳು ಕ್ರೌರ್ಯ ಮೆರೆಯುತ್ತಿದ್ದಾರೆ, ಪೊಲೀಸರ ಮೇಲೆ ಹಲ್ಲೆ ನಡೆಸುವಷ್ಟು ಬಲಿಷ್ಠರಾಗಿದ್ದಾರೆ. ಹಿಂದೂ ಕಾರ್ಯಕರ್ತರ ಸರಣಿ ಕೊಲೆಗಳು ಈ ವ್ಯಾಪ್ತಿಯಲ್ಲಿ ಈ ಹಿಂದೆಯೂ ನಡೆದಿದೆ.

   ಇಷ್ಟಾಗಿಯೂ ಈ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸುವ ಯಾವ ಕ್ರಮವನ್ನೂ ಕಾಂಗ್ರೆಸ್ ಸರ್ಕಾರ ಕೈಗೊಂಡಿಲ್ಲ, ಬದಲಾಗಿ ಈ ಪ್ರದೇಶವನ್ನು ವಿಧ್ವಂಸಕ ಚಟುವಟಿಕೆಯ ತಾಣವಾಗಿ ಪೋಷಿಸುತ್ತಿದೆ ಅದರ ಪರಿಣಾಮವಾಗಿಯೇ ಕ್ಷುಲ್ಲಕ ಕಾರಣವನ್ನು ಮುಂದಿಟ್ಟುಕೊಂಡು ಕಿಡೆಗೇಡಿಗಳೆಲ್ಲ ಒಟ್ಟುಗೂಡಿ ದಂಗೆ ಎದ್ದು ಪೊಲೀಸರಿಗೆ ಸವಾಲೆಸೆದಿದ್ದರೆ, ಈ ಕೂಡಲೇ ಕರ್ನಾಟಕ ಕಾಂಗ್ರೆಸ್‌
ಸರ್ಕಾರ ಕೋಮು ಪಕ್ಷಪಾತದ ಧೋರಣೆಯನ್ನು ಬದಿಗಿಟ್ಟು ಸಮಾಜಘಾತುಕ ದುಷ್ಟರ ವಿರುದ್ಧ ಕಠಿಣ ಕ್ರಮ ಜರುಗಿಸದಿದ್ದರೆ ಶಾಂತಿ-ಸುವ್ಯವಸ್ಥೆಗೆ ಹೆಸರಾದ ಮೈಸೂರು ಕೋಮು ದಳ್ಳುರಿಗೆ ಸಿಲುಕುವ ಅಪಾಯಕ್ಕೆ ತಲುಪಿದರೆ ಕಾಂಗ್ರೆಸ್ ಸರ್ಕಾರವೇ ಅದರ ಹೊಣೆ ಹೊರಬೇಕಾದೀತು? ಎಂದು ಎಚ್ಚರಿಸಿದ್ದಾರೆ.

Recent Articles

spot_img

Related Stories

Share via
Copy link