ಹಾವೇರಿ :
ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮಾಸೂರ ಕ್ಷೇತ್ರದ ಎಸ್‍ಕೆ ಕರಿಯಣ್ಣನವರ ಅವರ ವಿಜಯೋತ್ಸವವನ್ನು ನಗರದ ಜಿಲ್ಲಾ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರೊಂದಿಗೆ ಆಚರಿಸಿದರು. ವಿಜಯೋತ್ಸವದಲ್ಲಿ ಮಾತನಾಡಿದ ಎಸ್‍ಕೆ ಕರಿಯಣ್ಣನವರ ಜಿಲ್ಲೆಯ ಸರ್ವಾಂಗಿಣ ಅಭಿವೃದ್ಧಿಗಾಗಿ ಎಲ್ಲ ಜಿಪಂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶ್ರಮವಹಿಸಿ ಕೆಲಸ ಮಾಡುತ್ತೇನೆ.
ಕಾಂಗ್ರೇಸ್ ಪಕ್ಷದ ನಾಯಕರು ಹಾಗೂ ಪಕ್ಷ ನೀಡಿದ ಉನ್ನತ ಸ್ಥಾನಕ್ಕೆ ಗೌರವ ತಂದು. ಅಭಿವೃದ್ದಿಪರ ಕಾರ್ಯಕ್ಕೆ ಮುಂದಾಗುತ್ತೇನೆ . ನನಗೆ ಸಹಕಾರ ನೀಡಿದ ಪಕ್ಷದ ಎಲ್ಲ ಮುಖಂಡರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಶಾಸಕ ಬಿಸಿ ಪಾಟೀಲ. ಜಿಪಂ ಸದಸ್ಯರು ಕಾಂಗ್ರೇಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
