ರಾಯಚೂರು:

ಶಾಲೆಯಿಂದ ಬರುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದ ಸಾನಬಾಳ ರಸ್ತೆಯಲ್ಲಿ ನಡೆದಿದೆ.
15 ವರ್ಷದ ಭೂಮಿಕಾ ಹತ್ಯೆಯಾದ 9ನೇ ತರಗತಿ ವಿದ್ಯಾರ್ಥಿನಿ.
ಖಾಸಗಿ ಹೈಸ್ಕೂಲಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಮನೆಗೆ ಬರುತ್ತಿದ್ದ ವೇಳೆ ರಸ್ತೆಯಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಂದಿದ್ದಾರೆ.
ಭೂಮಿಕಾ ಹೊಟ್ಟೆಯ ಭಾಗಕ್ಕೆ ಗಂಭೀರವಾಗಿ ಗಾಯವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಸ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ







