ಬೆಂಗಳೂರು:
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೈದಾನ
ಪ್ರವೇಶಿಸಿದ್ದ ಯುವಕನಿಗೆ ಥಳಿಸಿದ್ದನ್ನು ಪ್ರಶ್ನಿಸಿ
ಸಾಮಾಜಿಕ ಹೋರಾಟಗಾರ ಮರಿಲಿಂಗಗೌಡಮಾಲಿ
ಪಾಟೀಲ್ ಮಾನವ ಹಕ್ಕುಗಳ ಆಯೋಗಕ್ಕೆ ದೂರು
ನೀಡಿದ್ದಾರೆ.
ಮಾನವೀಯತೆ ಮರೆತು ಲಕ್ಷಾಂತರ ಜನರ ಮುಂದೆ
ಯುವಕನಿಗೆ ಥಳಿಸಿದ್ದಾರೆ. ಹಲ್ಲೆ ಮಾಡಲು ಇವರಿಗೆ ಏನು ಹಕ್ಕಿದೆ? ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೇ
ಹೊರತು ಹಲ್ಲೆ ಮಾಡುವ ಅಧಿಕಾರ ಯಾರಿಗೂ ಇಲ್ಲ.
ಹೀಗಾಗಿ ಹಲ್ಲೆ ಮಾಡಿದವರ ವಿರುದ್ಧ ಕ್ರಮ
ಕೈಗೊಳ್ಳಬೇಕೆಂದು ಮಾನವ ಹಕ್ಕುಗಳ ಆಯೋಗಕ್ಕೆ
ದೂರು ನೀಡಿದ್ದಾರೆ