ಬೆಂಗಳೂರು :
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಪಾಲಿಗೆ ಜೂನ್ 4 ಎಂಬುದು ಕಪ್ಪುಚುಕ್ಕೆ. ಈ ‘ಕಪ್’ಚುಕ್ಕೆಯೊಂದಿಗೆ ಚೊಚ್ಚಲ ಬಾರಿ ಟ್ರೋಫಿ ಗೆದ್ದ ಖುಷಿಯಲ್ಲಿದ್ದ ಆರ್‌ಸಿಬಿ ಅಭಿಮಾನಿಗಳ ಸಂಭ್ರಮವು ಒಂದೇ ದಿನಕ್ಕೆ ಸೀಮಿತವಾಗಿತ್ತು. ಜೂನ್ 3 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಆರ್‌ಸಿಬಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಈ ಗೆಲುವಿನ ಬೆನ್ನಲ್ಲೇ ಬೆಂಗಳೂರಿನಲ್ಲಿ ಸಂಭ್ರಮಾಚರಣೆಯನ್ನು ಏರ್ಪಡಿಸಲಾಗಿತ್ತು.
ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಈ ಸಂಭ್ರಮಾಚರಣೆಯ ವೇಳೆ ಉಂಟಾದ ಕಾಲ್ತುಳಿತದಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ 11 ಅಭಿಮಾನಿಗಳು ಮೃತಪಟ್ಟಿದ್ದರು. ಇನ್ನೂ ಹಲವರು ಗಾಯಗೊಂಡಿದ್ದರು. ಈ ಅಹಿತಕರ ಘಟನೆ ಆರ್‌ಸಿಬಿ ಪಾಲಿಗೆ ಕಪ್ಪು ಚುಕ್ಕೆಯಾಗಿ ಮಾರ್ಪಟ್ಟಿದೆ.
ಈ ದುರ್ಘಟನೆಗೆ ವಿರಾಟ್ ಕೊಹ್ಲಿ ಕೂಡ ಖೇದ ವ್ಯಕ್ತಪಡಿಸಿದ್ದಾರೆ. ಜೂನ್ 4 ರಂದು ನಡೆದ ಹೃದಯವಿದ್ರಾವಕ ಘಟನೆಯನ್ನು ನಾವು ಜೀವನದಲ್ಲೇ ನಿರೀಕ್ಷಿಸಿರಲಿಲ್ಲ. ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲಿ ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿತ್ತು… ಆದರೆ ದುರಂತವಾಗಿ ಮಾರ್ಪಟ್ಟಿತು.
ಅಭಿಮಾನಿ-ಸುರಕ್ಷತಾ ಲೆಕ್ಕಪರಿಶೋಧನಾ ಚೌಕಟ್ಟನ್ನು ರಚಿಸಿ ಮತ್ತು ಜನಸಂದಣಿ ನಿರ್ವಹಣೆ ಮತ್ತು ತುರ್ತು ಪ್ರತಿಕ್ರಿಯೆಯ ಕುರಿತು ಸ್ಥಳೀಯ ತಂಡಗಳಿಗೆ ತರಬೇತಿ ನೀಡುವುದು. ಆರ್‌ಸಿಬಿಯ ಅತ್ಯಂತ ಉತ್ಸಾಹಭರಿತ ಅಭಿಮಾನಿಗಳ ಕಥೆಗಳು ಮತ್ತು ಹೆಸರುಗಳನ್ನು ಗೌರವಿಸಲು ಬೆಂಗಳೂರಿನಲ್ಲಿ ವಿಶೇಷ ಸ್ಮಾರಕ ಸ್ಥಳವನ್ನು ರಚಿಸುವುದು.
ಈ ತಂಡದ ಮೇಲಿನ ನಂಬಿಕೆ ಕ್ರೀಡಾಂಗಣಗಳಿಗೆ ಮಾತ್ರ ಸೀಮಿತವಾಗಿರಬಾರದು. ಕ್ರೀಡಾಂಗಣಗಳಲ್ಲಿ ಉದ್ಯೋಗಗಳನ್ನು ಸೃಷ್ಟಿಸಿ, ಸ್ಥಳೀಯ ಪ್ರತಿಭೆಗಳನ್ನು ಪೋಷಿಸಿ ಮತ್ತು ಮುಂದಿನ ಪೀಳಿಗೆಯ ಕ್ರೀಡಾ ವೃತ್ತಿಪರರನ್ನು ಬೆಂಬಲಿಸುವುದು.ಈ ಮೂಲಕ ಆರ್‌ಸಿಬಿ ಅಭಿಮಾನಿಗಳ ಬಗ್ಗೆ ವಿಶೇಷ ಕಾಳಜಿವಹಿಸಲು ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮುಂದಾಗಿದೆ.
ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಕಾಲ್ತುಳಿತದಿಂದ ಮೃತಪಟ್ಟ 11 ಅಭಿಮಾನಿಗಳ ಕುಟುಂಬಕ್ಕೆ 25 ಲಕ್ಷ ರೂ. ನೆರವು ನೀಡಿರುವುದಾಗಿ ತಿಳಿಸಿತ್ತು. ಇದೀಗ ಸಾಮಾಜಿಕ ಜವಾಬ್ದಾರಿಯೊಂದಿಗೆ ವಿಶೇಷ ಕಾಳಜಿವಹಿಸುವುದಾಗಿ ಆರ್‌ಸಿಬಿ ಭರವಸೆ ನೀಡಿದೆ.








