ಅರುಣ್‌ ಯೋಗಿರಾಜ್‌ ಗೆ ವೀಸಾ ನಿರಾಕರಿಸಿದ ಅಮೇರಿಕ

ಮೈಸೂರು

   ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತನೆ ಮಾಡಿರುವ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್​ಗೆ  ಅಮೆರಿಕ ವೀಸಾ ನಿರಾಕರಿಸಿದೆ. ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು 20 ದಿನಗಳ ಪ್ರವಾಸಕ್ಕೆ ಅರುಣ್ ಯೋಗಿರಾಜ್ ಅಮೆರಿಕಾಗೆ ಹೋಗಬೇಕಿತ್ತು. ಅದಕ್ಕಾಗಿ ಅವರು ಜೂನ್​ನಲ್ಲಿ ವೀಸಾಗೆ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ನಿಬಂಧನೆಗಳನ್ನು ಪೂರ್ತಿಗೊಳಿಸದ ಹಿನ್ನೆಲೆಯಲ್ಲಿ ಇದೀಗ ವೀಸಾ ನಿರಾಕರಣೆ ಮಾಡಲಾಗಿದೆ.

   ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತನೆ ಮಾಡುವ ಮೂಲಕ ಇಡೀ ಕರ್ನಾಟಕದ ಮನೆ ಮಾತಾಗಿದ್ದರು. ಅರುಣ್ ಯೋಗಿರಾಜ್​ ಅವರ ಪ್ರತಿಭೆ ಮತ್ತು ಕೊಡುಗೆಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಲಾಗಿತ್ತು.

   ಅಮೆರಿಕದ ಕನ್ನಡ ಕೂಟಗಳ ಸಂಘ, ವಿಶ್ವ ಕನ್ನಡ ಸಮ್ಮೇಳನ-2024 ಕಾರ್ಯಕ್ರಮವನ್ನು ವರ್ಜೀನಿಯಾದ ರಿಚ್ಮಂಡ್ನಲ್ಲಿ ಆಯೋಜಿಸಲಾಗಿತ್ತು. ಇದೇ ಕಾರ್ಮಕ್ರಮಕ್ಕೆ ಯೋಗಿರಾಜ್ ಮತ್ತು ಅವರ ಕುಟುಂಬಸ್ಥರಿಗೆ ಆಹ್ವಾನಿಸಲಾಗಿತ್ತು ಎನ್ನಲಾಗಿದೆ. ಸದ್ಯ ವೀಸಾ ಅರ್ಜಿಯನ್ನು ತಿರಸ್ಕರಿಸಿರುವ ಅಮೆರಿಕ ರಾಯಭಾರ ಕಚೇರಿ ಇದುವರೆಗೆ ಯಾವುದೇ ಕಾರಣವನ್ನು ನೀಡಿಲ್ಲ.

   ಶಿಲ್ಪಿ ಅರುಣ್ ಯೋಗಿರಾಜ್ ಅವರು ಜನವರಿ 22ರಂದು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ರಾಮಲಲ್ಲಾ ಮೂರ್ತಿಯನ್ನು ಕೆತ್ತನೆ ಮಾಡಿದ್ದಾರೆ. ಅವರು ಹೆಸರಾಂತ ಶಿಲ್ಪಿಗಳ ವಂಶಕ್ಕೆ ಸೇರಿದವರಾಗಿದ್ದಾರೆ. ಎಂಬಿಎ ಮುಗಿಸಿರುವ ಅರುಣ್ ಅವರು ಮೊದಲು ಕೆಲಸ ಮಾಡಿ, ನಂತರ ಶಿಲ್ಪಕಲೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು. 2008 ರಿಂದ, ಅವರು ವಿಗ್ರಹಗಳನ್ನು ಕೆತ್ತನೆ ಮಾಡಲು ಆರಂಭಿಸಿದರು. ಭಾರತದಾದ್ಯಂತ ಮನ್ನಣೆ ಪಡೆದರು.

 

Recent Articles

spot_img

Related Stories

Share via
Copy link
Powered by Social Snap