ಮೇ 6ರವರೆಗೆ ಮನೆಯಿಂದ ಮತ ಜಾರಿಯಲ್ಲಿರುತ್ತದೆ : ಆಯೋಗ

ಬೆಂಗಳೂರು

      ರಾಜ್ಯ ವಿಧಾನಸಭಾ ಚುನಾವಣೆ ಇದೇ 10 ರಂದು ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಕೇಂದ್ರ ಚುನಾವಣಾ ಆಯೋಗ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದ ಮತದಾನ ಮಾಡುವ ಕಾರ್ಯಕ್ರಮ ಪ್ರಗತಿಯಲ್ಲಿದ್ದು, ಮೇ.6ರವರೆಗೆ ಈ ಪ್ರಕ್ರಿಯೆ ನಡೆಯಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಛೇರಿ ತಿಳಿಸಿದೆ.

       ಹಿರಿಯ ನಾಗರೀಕರು ಹಾಗೂ ದಿವ್ಯಾಂಗರಿಗೆ ಮನೆಯಿಂದಲೇ ಮತದಾನ ಮಾಡುವ ಯೋಜನೆಯಂತೆ ನಮೂನೆ ಅರ್ಜಿ ಸಲ್ಲಿಸಿದವರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

       ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನ ಮಾಡುವುದಕ್ಕೆ ಅರ್ಜಿ ಸಲ್ಲಿಸಿದವರಿಗೆ ಚುನಾವಣಾ ಸಿಬ್ಬಂದಿಗಳು ಭೇಟಿ ನೀಡಿ ಮನೆಯಿಂದ ಮತದಾನದ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ. ಬೆಂಗಳೂರು ವ್ಯಾಪ್ತಿಯಲ್ಲಿ ಬರುವ 28 ವಿಧಾನಸಭಾ ಕ್ಷೇತ್ರದಲ್ಲಿ ನಿನ್ನೆಯ ವರೆಗೆ 11 ಸಾವಿರಕ್ಕೂ ಹೆಚ್ಚು ಹಿರಿಯನಾಗರೀಕರು. ದಿವ್ಯಾಂಗರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಛೇರಿ ವರದಿ ಮಾಡಿದೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap