ವಯನಾಡು ಕ್ಷೇತ್ರಕ್ಕೆ ರಾಹುಲ್ ಗಾಂಧಿ ರಾಜಿನಾಮೆ …….!

ನವದೆಹಲಿ:

    ಕಳೆದ ಲೋಕಸಭೆ ಚುನಾವಣೆಯಲ್ಲಿ ಕೇರಳದ ವಯನಾಡು ಮತ್ತು ರಾಯ್‌ ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ ಎರಡೂ ಕಡೆ ಜಯ ಗಳಿಸಿದ್ದಾರೆ. ಇದೀಗ ಅವರು ಒಂದು ಕಡೆ ತಮ್ಮ ಸ್ಥಾನವನ್ನು ಬಿಟ್ಟು ಕೊಡಬೇಕಿದೆ. ಮೂಲಗಳ ಪ್ರಕಾರ ಅವರು ವಯನಾಡು ಕ್ಷೇತ್ರವನ್ನು ತೊರೆಯಲಿದ್ದು, ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಇಲ್ಲಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

    ಕಾಂಗ್ರೆಸ್‌ನ ಭದ್ರಕೋಟೆ ಎನಿಸಿಕೊಂಡಿರುವ ರಾಯ್‌ ಬರೇಲಿ ಮತ್ತು ವಯನಾಡು ಎರಡೂ ಕಡೆ ರಾಹುಲ್‌ ಗಾಂಧಿ 3 ಲಕ್ಷಕ್ಕೂ ಅಧಿಕ ಮತಗಳಿಂದ ಜಯಭೇರಿ ಭಾರಿಸಿದ್ದಾರೆ. 2019ರಲ್ಲಿ ಉತ್ತರ ಪ್ರದೇಶದ ಅಮೇಥಿ ಮತ್ತು ವಯನಾಡಿನಲ್ಲಿ ಸ್ಪರ್ಧಿಸಿದ್ದ ಅವರು ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋತಿದ್ದರು. ವಯನಾಡಿನಲ್ಲಿ ಸತತ ಎರಡನೇ ಬಾರಿ ಜಯ ಗಳಿಸಿದ ಅವರು ಇದೀಗ ಅನಿವಾರ್ಯವಾಗಿ ಅಲ್ಲಿನ ಸ್ಥಾನವನ್ನು ತ್ಯಜಿಸಬೇಕಾಗಿದೆ. ಹೀಗಾಗಿ ಅಲ್ಲಿನ ಕಾಂಗ್ರೆಸ್‌ ಕಾರ್ಯಕರ್ತರು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

    ಲೋಕಸಭಾ ಚುನಾವಣೆಯ ಬಗ್ಗೆ ಮಂಗಳವಾರ (ಜೂನ್‌ 11) ಮಾತನಾಡಿದ್ದ ರಾಹುಲ್‌ ಗಾಂಧಿ, ಒಂದು ವೇಳೆ ವಾರಣಾಸಿಯಲ್ಲಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಿರುದ್ಧ ಸ್ಪರ್ಧಿಸಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು 2-3 ಲಕ್ಷ ಮತಗಳ ಅಂತರಿಂದ ಸೋಲುತ್ತಿದ್ದರು ಎಂದು ಹೇಳಿದ್ದರು. ಆ ಮೂಲಕ ಅವರು ಪ್ರಿಯಾಂಕಾ ಗಾಂಧಿ ಅವರ ಚೊಚ್ಚಲ ಸ್ಪರ್ಧೆಯ ಸುಳಿವು ನೀಡಿದ್ದರಾ ಎನ್ನುವ ಸಂಶಯ ಮೂಡಿದೆ.

   ಹಾಗೆ ನೋಡಿದರೆ ಪ್ರಿಯಾಂಕಾ ಗಾಂಧಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎನ್ನುವ ವದಂತಿ ಹಬ್ಬುತ್ತಿರುವುದು ಇದು ಮೊದಲ ಸಲವೇನಲ್ಲ. 2019ರ ಲೋಕಸಭಾ ಚುನಾವಣೆಯಿಂದಲೂ ಅವರು ಕಣಕ್ಕಿಳಿಯುತ್ತಾರೆ ಎಂಬ ವದಂತಿ ಇದೆ. ಆಗ ಬಿಜೆಪಿ ಅಲೆಯನ್ನು ತಡೆಯಲು ಕಾಂಗ್ರೆಸ್ ವಾರಣಾಸಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲಿದೆ ಎಂದೇ ಊಹಿಸಲಾಗಿತ್ತು. ಆದರೆ ಅವರು ಸ್ಪರ್ಧಿಸಿರಲಿಲ್ಲ.

   ಬಳಿಕ 2022ರ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿಯೂ ಪ್ರಿಯಾಂಕಾ ಗಾಂಧಿ ಹೆಸರು ಮತ್ತೆ ಚಾಲ್ತಿಗೆ ಬಂತು. ಅವರು ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap