ಬೆಂಗಳೂರು
ಲೋಕಾಯುಕ್ತ ಬಲವರ್ಧನೆ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಬಿಜೆಪಿ ಬದ್ಧವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಷಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡಲು ಆದ್ಯತೆ ನೀಡಿರುವ ಸರ್ಕಾರ ಲೋಕಾಯುಕ್ತ ಸಂಸ್ಥೆಗೆ ಅಗತ್ಯ ಸ್ವಾಯತ್ತತೆ ಹಾಗೂ ಅಧಿಕಾರ ನೀಡಿದೆ. ಭ್ರಷ್ಟಾಚಾರಿಗಳನ್ನು ರಕ್ಷಿಸುವ ಅಥವಾ ಸಮರ್ಥಿಸುವ ಯಾವುದೇ ಕೆಲಸವನ್ನು ಬಿಜೆಪಿ ಮಾಡುವುದಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಪಕ್ಷದ ಪ್ರಗತಿ ವಿರೋಧ ಪಕ್ಷಗಳಿಗೆ ಹತಾಶೆಯನ್ನುಂಟುಮಾಡಿದ್ದು, ಕ್ಷುಲ್ಲಕ ಆರೋಪಗಳಲ್ಲಿ ತೊಡಗಿವೆ. ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಅನಗತ್ಯ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








