ಬೆಳಗಾವಿ:
ಗೋಕಾಕ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಹಾಂತೇಶ ಕಡಾಡಿ ಕಣಕ್ಕಿಳಿದಿದ್ದಾರೆ. ಆಯಾ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿಯನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ್ದು, ಅದರ ತೀರ್ಮಾನವೇ ಅಂತಿಮ. ನಾವು ಶಿಫಾರಸು ಮಾಡಿದ ಅಭ್ಯರ್ಥಿಯನ್ನು ಹೈಕಮಾಂಡ್ ಆಯ್ಕೆ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.
ಪಕ್ಷದ ವಿರುದ್ಧ ಬಂಡಾಯವೆದ್ದಿರುವ ಕಾಂಗ್ರೆಸ್ ನಾಯಕರ ಮನವೊಲಿಸಲು ನಾವು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ. ಟಿಕೆಟ್ ನೀಡಿದ ಅಭ್ಯರ್ಥಿಯ ಗೆಲುವಿಗೆ ಸಹಕರಿಸಬೇಕೆಂದು ಸೂಚನೆ ನೀಡಲಾಗಿದೆ. ಆಕಾಂಕ್ಷಿಗಳಪಟ್ಟಿ ಬಳಹ ಇದೆ ಆತ್ಮೀಯರಿಗೆ ಸಿಗಬೇಕೆಂಬುವ ನಿರ್ಧಾರ ನಮ್ಮ ಕೈಯಲಿಲ್ಲ ಅದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ತಿಳಿಸಿದರು.