ಇಡೀ ರಾಜ್ಯದ ಜನತೆಗೆ ಮಾತು ಕೊಟ್ಟಂತೆ ನಡೆದುಕೊಳ್ಳಲಾಗಿದೆ :ಯಶವಂತರಾಯಗೌಡ ಪಾಟೀಲ

ಇಂಡಿ:

     ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆ ಇಂಡಿ ನಗರಕ್ಕೆ ಆಗಮಿಸುತ್ತಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ ಶಿವುಕುಮಾರ ಆಗಮನದ ಹಿನ್ನಲೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಇವರ ಅಧ್ಯಕ್ಷತೆಯಲ್ಲಿ ಇಂದು ಮಿನಿವಿಧಾನಸೌಧಾ ಕಟ್ಟಡದ ಸಭಾ ಭವನದಲ್ಲಿ ಪೂರ್ವಭಾವಿ ಸಭೆ ಜರುಗಿತು.

    ಈ ಸಂಧರ್ಬದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿದ ಅವರು ಇಡೀ ರಾಜ್ಯದ ಜನತೆಗೆ ಮಾತು ಕೊಟ್ಟಂತೆ ನಡೆದುಕೊಳ್ಳಲಾಗಿದೆ. ಪಂಚ ಗ್ಯಾರಂಟಿಗಳ ಸರದಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಉಪಮುಖ್ಯ ಮಂತ್ರಿ ಡಿ.ಕೆ.ಶಿವುಕುಮಾರ ರಾಜ್ಯದಲ್ಲಿ ಅನೇಕ ಯೋಜನೆಗಳನ್ನು ನೀಡಿದ್ದಾರೆ. ಇಂಡಿ ಮತಕ್ಷೇತ್ರದಲ್ಲಿ ಸಾಕಷ್ಟು ಸರಕಾರದಿಂದ ಅನುಧಾನದ ತಂದು ಅಭಿವೃದ್ದಿ ಪಡಿಸಿದ್ದೇನೆ. 

   ಹೀಗಾಗಿ ಹತ್ತು ಹಲವಾರು ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮವನ್ನು ಜುಲೈ09ರಂದು ಕರ್ನಾಟಕ ಸರಕಾರದ ಭಾಗ್ಯಗಳ ಸರದಾರ ರಾಜ್ಯ ಹಸಿವು ಮುಕ್ತಗೋಳಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯ ಮಂತ್ರಿ ಡಿ.ಕೆ ಶಿವುಕುಮಾರ ಆಗಮಿಸಲ್ಲಿದ್ದಾರೆ. ಈ ಕಾರ್ಯಕ್ರಮ ನಭೋತೋ ನಭವಿಷ್ಯಂತಿ ಎನ್ನುವ ವಿಧದಲ್ಲಿ ನಡೆಯ ಬೇಕಾಗಿರುವದರಿಂದ್ದ ತಾಲೂಕಾಢಳಿತ ಹಾಗೂ ಜಿಲ್ಲಾಢಳಿತದ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮ ಯಶಸ್ವೀಗೋಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

   ಜಿಲ್ಲಾಧಿಕಾರಿ ಟಿ.ಭೂಬಾಲನ್ , ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರೀಷಿ ಆನಂದ ,ಎಸ್ಪಿ ಲಕ್ಷö್ಮಣ ನಿಂಬರಗಿ , ಎಸಿ ಅನುರಾಧಾ ವಸ್ತçದ ,ತಹಶೀಲ್ದಾರ ಬಿ.ಎಸ್ ಕಡಕಭಾವಿ,ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭೀಮಾಶಂಕರ ಕನ್ನೂರ, ಕೃಷಿ ಅಧಿಕಾರಿ ಮಹಾದೇವಪ್ಪ ಏವೂರ, ತೋಟಗಾರಿಕಾಧಿಕಾರಿ ಎಚ್.ಎಸ್ ಪಾಟೀಲ.ಲೋಕೋಪಯೋಗಿ ಇಲಾಖೆ ಅಧಿಕಾರಿ ದಯಾನಂದ ಮಠ, ಪುರಸಭೆ ಮುಖ್ಯಾಧಿಕಾರಿ ಕಟ್ಟಿಮನಿ ಸೇರಿದಂತೆ ತಾಲೂಕಾಢಳಿತ ,ಜಿಲ್ಲಾಢಳಿತ ಅಧಿಕಾರಿಗಳು ಸಭೆಯಲ್ಲಿದ್ದರು.

Recent Articles

spot_img

Related Stories

Share via
Copy link