ಕಾಂಗ್ರೆಸ್ ಎಂದಿಗೂ ಸತ್ಯದ ಹಾದಿಯಲ್ಲೇ ನಡೆದಿದೆ : ಪ್ರಿಯಾಂಕ ಗಾಂಧಿ

ಬೆಂಗಳೂರು

     ಸಂವಿಧಾನ ಬದಲಾದರೆ ಎಲ್ಲ ಅವಕಾಶಗಳು ಕಳೆದು ಹೋಗಲಿವೆ. ಕೋಲಿ ಸಮಾಜವನ್ನು ಎಸ್ ಟಿ ಸೇರಿಸಲು ರಾಜ್ಯ ಸರ್ಕಾರ ಕಳಿಸಿದ ಪ್ರಸ್ತಾವನೆಯನ್ನು ಮೋದಿ ಸರ್ಕಾರ ತಿರಸ್ಕಾರ ಮಾಡಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

     ನಮ್ಮ ದೇಶ ಸತ್ಯಮೇವ ಜಯತೇ ಎನ್ನುವ ಮಾತನ್ನು ಅಕ್ಷರಶಃ ಪಾಲಿಸುವ ದೇಶವಾಗಿದೆ. ಮನೆಯಲ್ಲಿ ತಾಯಿ ಮಕ್ಕಳು ಸತ್ಯ ಹೇಳುವಂತೆ ಹೇಳುತ್ತಾಳೆ. ಮಹಾತ್ಮಾಗಾಂಧಿ ಕೂಡಾ ಸತ್ಯದ ಹಾದಿಯಲ್ಲೆ ನಡೆದರು. ರಾಜಕೀಯ ಕೂಡಾ ಸತ್ಯದ ದಾರಿಯಲ್ಲೇ ನಡೆದಿದೆ. ಕಾಂಗ್ರೆಸ್ ಪಕ್ಷ ಸತ್ಯದ ರಾಜಕೀಯದ ಹಾದಿಯಲ್ಲೇ ನಡೆದಿದೆ. ಆದರೆ ಕಳೆದ ಹತ್ತುವರ್ಷಗಳಿಂದ ರಾಜಕೀಯದ ಹಾದಿ ಬದಲಾಗಿದೆ. ಇಲ್ಲಿ ಸತ್ಯಕ್ಕೆ ಜಾಗವಿಲ್ಲದಾಗಿದೆ.

    ಕಳೆದ ಐದು ವರ್ಷದ ಅವಧಿಯಲ್ಲಿ ಇಲ್ಲಿನ ಸಂಸದ ಒಂದು ರೈಲು ಬಿಡಿಸಿದ್ದು ಬಿಟ್ಟರೇ ಬೇರೆ ಏನು ಮಾಡಿಲ್ಲ ಎಂದು ಆರೋಪಿಸಿದ ಪ್ರಿಯಾಂಕಾ ಗಾಂಧಿ, ಕುಡಿಯುವ ನೀರಿಗೂ ಕೂಡಾ ಕಷ್ಟಪಡುವ ವಾತಾವರಣ ನಿರ್ಮಾಣವಾಗಿದೆ. ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಶಿಕ್ಷಣ ಪಡೆದವರಿಗೆ ಉದ್ಯೋಗ ವಿಲ್ಲದೇ ದೂರದ ದೊಡ್ಡ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ.

    ದೇಶದ ಯವಕರು ಸೇನೆಯಲ್ಲಿ ಸೇವೆ ಸಲ್ಲಿಸಲು ಉತ್ಸುಕರಾಗಿದ್ದರು ಆದರೆ ಅಗ್ನಿ ವೀರ್ ಯೋಜನೆ ಜಾರಿಗೆ ತಂದು ಸೈನ್ಯಕ್ಕೆ ಸೇರುವ ಯುವಕರಿಗೆ ಯಾವುದೇ ಭರವಸೆ ನೀಡಿಲ್ಲ. ರೈತರು ಹೊಲಗಳಲ್ಲಿ ಕೆಲಸ ಮಾಡುತ್ತಿದ್ದರು. ಚಿಕ್ಕಪುಣ್ಣ ವ್ಯಾಪಾರಗಳಿಂದ ಜನರ ಜೀವನ ನಿರ್ವಹಣೆ ನಡೆಯುತ್ತಿತ್ತು. ಜಿಎಸ್ ಟಿ ಯಿಂದಾಗಿ, ನೋಟ್ ಬಂಧಿಯಿಂದಾಗಿ ಎಲ್ಲ ವರ್ಗದವರು ಕಷ್ಟಪಡುವಂತಾಗಿದೆ.

    ರೇಲ್ವೆ ವಲಯದಂತ ಪ್ರಮುಖ ಯೋಜನೆಗಳು ಜಿಲ್ಲೆಗೆ ಮಂಜೂರಾಗಿದ್ದವು ಆದರೆ ಕೇಂದ್ರ ಸರ್ಕಾರ ಎಲ್ಲ ಯೋಜನೆಗಳನ್ನು ವಾಪಸ್ ಪಡೆದಿದೆ. ಕಾರಣ ಇದು ಖರ್ಗೆ ಅವರ ಜಿಲ್ಲೆಯಾಗಿದೆ.ಮಹಾಲಕ್ಷ್ಮಿ ಯೋಜನೆ, ಖಾಲಿ ಹುದ್ದೆಗಳ ಭರ್ತಿ ಮಾಡುತ್ತೇವೆ, ಅಗ್ನಿವೀರ್ ಯೋಜನೆ ರದ್ದು, ನರೇಗಾ ಯೋಜನೆಯಡಿಯಲ್ಲಿ ಮಾನವ ದಿನಗಳ ಹೆಚ್ಚಳ, ರೈತರ ಸಾಲ ಮನ್ನಾ ಮಾಡುವ ಉದ್ದೇಶ ಹೊಂದಲಾಗಿದೆ. ರೈತರ ಸಾಲ ಮನ್ನಾಮಾಡಲು ಹಣ ವಿಲ್ಲ ಎಂದ ಮೋದಿ ಬಂಡವಾಳಶಾಹಿಗಳ 16 ಲಕ್ಷಕೋಟಿ ಸಾಲ ಮನ್ನಾ ಮಾಡಿದ್ದಾರೆ.

   ಅವರು ಬಹಳ ದೊಡ್ಡ ಭರವಸೆ ನೀಡಿದ್ದರು. ಅವುಗಳಲ್ಲಿ ತೊಗರಿ ಹಬ್ ಮಾಡುವುದು ಕೂಡಾ ಸೇರಿತ್ತು. ಎಂ ಎಸ್ ಪಿ ಫಿಕ್ಸ್ ಮಾಡುವುದಾಗಿ ಹೇಳಿದ್ದರು. ಪೆಟ್ರೋಲ್ ಡಿಸೇಲ್, ಗ್ಯಾಸ್ ಸಿಲಿಂಡರ, ಬೇಳೆ, ದಿನಬಳಕೆ ವಸ್ತುಗಳು ಬಂಗಾರ, ಬೆಳ್ಳಿ ಬೆಲೆ ಏರಿವೆ. ಪ್ರತಿಯೊಂದಕ್ಕೂ ಜಿಎಸ್ ಟಿ ತೆರಿಗೆ ವಿಧಿಸಲಾಗುತ್ತಿದೆ. ಆದರೆ ಯಾವುದನ್ನೂ ಮೋದಿ ಮಾಡಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ರೈತರಿಗೆ ಅನುಕೂಲ ಮಾಡಿಕೊಡಲಿದ್ದೇವೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ಮುಟ್ಟುತ್ತಿರುವ ಬಗ್ಗೆ ಸಭಿಕರಿಗೆ ಕೇಳಿ ಖಾತ್ರಿ ಪಡೆಸಿಕೊಂಡ ಪ್ರಿಯಾಂಕಾ, ಕಾಂಗ್ರೆಸ್ ಸರ್ಕಾರ ಬಡವರ ಪರವಿರುವ ಪಕ್ಷವಾಗಿದ್ದು, ಬಿಜೆಪಿ ಶ್ರೀಮಂತರ ಪಕ್ಷವಾಗಿದೆ ಎಂದರು.

    ಎರಡೆರಡು ಸಿಎಂ ಗಳನ್ನು ಜೈಲಿಗೆ ತಳ್ಳಲಾಗಿದೆ. ಆದರೂ ಕೂಡಾ ಮಿಡಿಯಾಗಳು ಸುಮ್ಮನಿವೆ.ಕಾರಣ ಬಹುತೇಕ ಮೀಡಿಯಾಗಳು ಶ್ರೀಮಂತರ ಆಧೀನದಲ್ಲಿವೆ. ರೇವಂತರೆಡ್ಡಿ ಮನೆಗೆ ದಿಲ್ಲಿ ಪೊಲೀಸರು ಬಂದಿರುವ ಬಗ್ಗೆ ಯಾವ ಮೀಡಿಯಾಗಳು ಪ್ರಶ್ನಿಸುವುದಿಲ್ಲ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap