ಅವರನ್ನು ಟೀಕಿಸಿದರೆ ಹೇಗೆ ಬ್ರಾಹ್ಮಣರನ್ನು ಬೈದಂತೆ ಆಗುತ್ತದೆ : ಎಂ ಬಿ ಪಾಟೀಲ್‌

ಬೆಂಗಳೂರು 

     ಬಿಜೆಪಿ  ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಟೀಕಿಸಿದರೆ ಹೇಗೆ ಬ್ರಾಹ್ಮಣರನ್ನು ಬೈದಂತೆ ಆಗುತ್ತದೆ. ಇದಕ್ಕೆ ಏನಾದರೂ ತರ್ಕ ಇದೆಯೇ ಎಂದು ಪ್ರಶ್ನೆ ಮಾಡಿದ್ದಾರೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ?ಎಂ.ಬಿ. ಪಾಟೀಲರಿಗೆ ಬ್ರಾಹ್ಮಣರನ್ನು ಕಂಡರೆ ಯಾಕಿಷ್ಟು ಸಿಟ್ಟು? ಬ್ರಾಹ್ಮಣರ ಮೇಲೆ ಇಷ್ಟೆಲ್ಲ ಸಿಟ್ಟು ಮಾಡಿಕೊಳ್ಳುವ ಅವರು ನಿಜಕ್ಕೂ ಲಿಂಗಾಯತರಾ?? ಎಂದು ಪ್ರತಾಪ್ ಸಿಂಹ ಕೇಳಿದ್ದರು. ಅದರ ಜತೆಗೆ ಎಂ.ಬಿ. ಪಾಟೀಲ್ ಅವರು ಸಿದ್ದರಾಮಯ್ಯ ಅವರ ಚೇಲಾ, ಅವರಿಗೆ ಏನು ಹೇಳಬೇಕೋ ಅದನ್ನು ಎಂ.ಬಿ ಪಾಟೀಲ್ ಬಾಯಿಯಲ್ಲಿ ಹೇಳಿಸುತ್ತಾರೆ ಎಂದು ಟೀಕಿಸಿದ್ದರು.

     ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಎಂ.ಬಿ. ಪಾಟೀಲ್ ಅವರು ಪ್ರತಾಪ್‌ಸಿಂಹ ಅವರು ಚೇಲಾ ಅಂತಾರೆ, ಬಿ.ಎಲ್. ಸಂತೋಷ್ ಚೇಳು ಅಂತಾರೆ. ಬೆಂಕಿ ಹಚ್ಚುವ ಕೆಲಸ ಮಾಡುತ್ತಾರೆ ಎಂದರು.

    ನಾನು ಬಿ ಎಲ್ ಸಂತೋಷ್ ಅವರ ಬಗ್ಗೆ ಮಾತನಾಡಿದ ತಕ್ಷಣ ಅದು ಇಡೀ ಬ್ರಾಹ್ಮಣ ಸಮುದಾಯವನ್ನು ಬೈದಂತಲ್ಲ. ನನ್ನ ಮತ್ತು ಬ್ರಾಹ್ಮಣರ ನಡುವಿನ ಸಂಬಂಧ ಎಷ್ಟೊಂದು ಮಧುರವಾಗಿದೆ ಎನ್ನುವುದನ್ನು ಒಮ್ಮೆ ವಿಜಯಪುರಕ್ಕೆ ಬಂದು ನೋಡಲಿ. ಪ್ರತಾಪ್ ಸಿಂಹ ದಿನವೂ ನನ್ನ ವಿರುದ್ಧ ವೈಯಕ್ತಿಕವಾಗಿ ಮಾತನಾಡುವುದನ್ನು ನಿಲ್ಲಿಸಬೇಕು. ಅವರ ಮನಃಸ್ಥಿತಿ ತುಂಬಾ ಚಿಂತಾಜನಕವಾಗಿರುವಂತಿದೆ” ಎಂದು ತಿರುಗೇಟು ನೀಡಿದರು.

    “ಹಿಂದೆ ಬಿಜೆಪಿಯ ಅನಂತ ಕುಮಾರ್ ಕೇಂದ್ರದಲ್ಲಿ ಮಂತ್ರಿಗಳಾಗಿದ್ದರು. ಆಗ ನಾನು ರಾಜ್ಯದಲ್ಲಿ ನೀರಾವರಿ ಸಚಿವನಾಗಿದ್ದೆ. ನಮ್ಮ ರಾಜ್ಯದ ಕೆಲಸಗಳ ಮೇಲೆ ಹೋದಾಗ ಅವರು ಪಕ್ಷದ ಮಿತಿ ಮೀರಿ, ಕರ್ನಾಟಕದ ಹಿತವನ್ನು ಕಾಯುತ್ತಿದ್ದರು. ನಮ್ಮನ್ನು ಎಲ್ಲಾ ಸಚಿವರು ಮತ್ತು ಅಧಿಕಾರಿಗಳ ಬಳಿಗೆ ಕೊಂಡೊಯ್ಯುತ್ತಿದ್ದರು. ಪ್ರತಾಪ್ ಅವರಿಂದ ಪಾಠ ಕಲಿಯಬೇಕಾಗಿಲ್ಲ. ಆದರೆ, ಬಿಜೆಪಿಯವರಿಗೆ ಈಗ ಅನಂತಕುಮಾರ್ ಅವರ ನೆನಪೂ ಇಲ್ಲ” ಎಂದರು.

    “ನಮ್ಮ ಬಿಎಲ್‌ಡಿಇ ಸಂಸ್ಥೆಯಿAದ ದಾಸಸಾಹಿತ್ಯದ ಸಮಗ್ರ ಸಂಪುಟ ತರುತ್ತಿದ್ದೇವೆ. ಬ್ರಾಹ್ಮಣರಾದ ಕೃಷ್ಣ ಕೊಲ್ಹಾರ ಕುಲಕರ್ಣಿಯವರ ಸಂಪಾದಕತ್ವದಲ್ಲಿ ಆದಿಲ್‌ಶಾಹಿ ಸಂಪುಟಗಳನ್ನು ತಂದೆವು. ಹಾಗೆಯೇ ನಮ್ಮ ಸಂಸ್ಥೆಯಲ್ಲಿ ಸಾಕಷ್ಟು ಬ್ರಾಹ್ಮಣರಿದ್ದಾರೆ. ನನಗೆ ಚಿಕ್ಕಂದಿನಲ್ಲಿ ಪಾಠ ಕಲಿಸಿದ ದೇಶಪಾಂಡೆ, ಹಣಮಂತರಾವ್ ಅವರೆಲ್ಲ ಬ್ರಾಹ್ಮಣರೇ. 1998ರಲ್ಲಿ ನಾನು ಲೋಕಸಭೆ ಚುನಾವಣೆಗೆ ನಿಂತು ಗೆದ್ದಾಗ ವಿಜಯಪುರ ಕ್ಷೇತ್ರದ ಒಂದು ಲಕ್ಷಕ್ಕಿಂತಲೂ ಹೆಚ್ಚು ಬ್ರಾಹ್ಮಣ ಮತದಾರರ ಪೈಕಿ ಶೇಕಡ 90ರಷ್ಟು ಜನ ನನಗೆ ಮತ ಚಲಾಯಿಸಿದ್ದರು” ಎಂದು ಅವರು ಉತ್ತರಿಸಿದರು.

    “ನಮ್ಮ ತಂದೆ ಮತ್ತು ನಾನು ಬ್ರಾಹ್ಮಣರ ಜತೆ ಮಧುರ ಸಂಬAಧಕ್ಕೆ ಹೆಸರಾಗಿದ್ದೇವೆ. ಹಲಗಲಿಯ ದೇವಸ್ಥಾನ, ವಿಜಯಪುರದ ಹನುಮಂತನ ದೇವಸ್ಥಾನ ಸೇರಿದಂತೆ ಬ್ರಾಹ್ಮಣ ಸಮುದಾಯದ ಅನೇಕ ಕೆಲಸಗಳನ್ನು ನಾನು ಹೃತ್ಪೂರ್ವಕವಾಗಿ ಮಾಡಿಕೊಟ್ಟಿದ್ದೇನೆ. ಹಾಗೆಯೇ ಆ ಸಮಾಜವೂ ನನ್ನೊಂದಿಗೆ ಅಭಿಮಾನದಿಂದ ಗುರುತಿಸಿಕೊಂಡಿದೆ. ಇವೆಲ್ಲ ಗೊತ್ತಿಲ್ಲದೆ ಪ್ರತಾಪ್ ಸಿಂಹ ಕೀಳು ಅಭಿರುಚಿಯ ವಿಕೃತಿಯನ್ನು ತೋರಿಸುತ್ತಿದ್ದಾರೆ. ಇನ್ನುಮುಂದೆ ನಾನು ಅವರ ಮಾತುಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

    ಪ್ರತಾಪ್ ಅವರು ಸಿದ್ದರಾಮಯ್ಯನವರು ನನ್ನ ಹೆಗಲ ಮೇಲೆ ಬಂದೂಕನ್ನಿಟ್ಟು ಬೇರೆಯವರತ್ತ ಹೊಡೆಯುತ್ತಿದ್ದಾರೆ ಎಂದಿದ್ದಾರೆ. ನಾನು ವಿಜಯಪುರದವನು. ಯಾರಿಗಾದರೂ ಹೊಡೆಯಬೇಕೆನಿಸಿದರೆ ನೇರವಾಗಿ ಹೊಡೆಯುವ ತಾಕತ್ತು ನನಗಿದೆ. ಇದನ್ನೆಲ್ಲ ಬಿಟ್ಟು ಅವರು ಬರಲಿರುವ ಲೋಕಸಭೆ ಚುನಾವಣೆಯ ಬಗ್ಗೆ ತಲೆ ಕೆಡಿಸಿಕೊಂಡು, ರಚನಾತ್ಮಕ ಕೆಲಸ ಮಾಡಲಿ ಎಂದು ಪಾಟೀಲ್ ಖಡಕ್ ಆಗಿ ನುಡಿದರು.

    ಬಿ ಎಲ್ ಸಂತೋಷ್ ಬಗ್ಗೆ ನನ್ನ ಟೀಕೆ ರಾಜಕೀಯ ಸ್ವರೂಪದ್ದು. ಅದರಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡುವ ಉದ್ದೇಶವಿಲ್ಲ. ನಾನು ನನ್ನ ಜೀವನದಲ್ಲೇ ಯಾವತ್ತೂ ಬ್ರಾಹ್ಮಣರ ಬಗ್ಗೆಯಾಗಲಿ, ಇನ್ನೊಂದು ಸಮುದಾಯದ ಬಗ್ಗೆಯಾಗಲಿ ಅಪ್ಪಿತಪ್ಪಿಯೂ ಅವಹೇಳನಕಾರಿಯಾಗಿ ಮಾತನಾಡಿಲ್ಲ. ನಾವು ಪ್ರತಿಯೊಬ್ಬರನ್ನೂ ಗೌರವಿಸುವ ಸಂಸ್ಕಾರವುಳ್ಳವರು ಎಂದು ಅವರು ಎದುರೇಟು ನೀಡಿದ್ದಾರೆ.

     ಪ್ರತಾಪ್ ಅವರು ನನ್ನನ್ನು ಸಿದ್ದರಾಮಯ್ಯನವರ ಚೇಲಾ ಎಂದಿದ್ದಾರೆ. ಈ ವ್ಯಕ್ತಿ ಸಂತೋಷ್ ಅವರು ಸಾಕಿಕೊಂಡಿರುವ ಒಂದು ಚೇಳು. ಅವರು ಇಂಥ ಹಲವು ಚೇಳುಗಳನ್ನು ಸಾಕಿಕೊಂಡಿದ್ದಾರೆ. ಹೀಗಾಗಿ ದಿನವೂ ಅವರು ಇಂಥ ಚೇಳುಗಳನ್ನು ಬಿಟ್ಟು, ಮಜಾ ತೆಗೆದುಕೊಳ್ಳುತ್ತಿರುತ್ತಾರೆ ಎಂದು ಸಚಿವರು ಕುಟುಕಿದರು.

     ನನ್ನದು ಚಿಲ್ಲರೆ ಖಾತೆ ಎಂದು ಬೇರೆ ಅವರು ಹೇಳಿದ್ದಾರೆ. ಕೈಗಾರಿಕಾ ಖಾತೆಯ ಮಹತ್ವದ ಬಗ್ಗೆ ಅವರು ಮೋದಿಯವರ ಬಳಿ ಕೇಳಿ ತಿಳಿದುಕೊಂಡರೆ ಒಳ್ಳೆಯದು. ಖಾತೆ ಯಾವುದಾದರೂ ನಾವು ಮಾಡುವ ಕೆಲಸ ಮುಖ್ಯ. ಇಂಥ ಪ್ರಾಥಮಿಕ ಸಂಗತಿಗಳು ಒಬ್ಬ ಸಂಸದರಿಗೆ ಗೊತ್ತಿಲ್ಲದೆ ಇರುವುದು ವಿಷಾದನೀಯ ಸಂಗತಿ ಎಂದು ಅವರು ಹೇಳಿದ್ದಾರೆ.

      ನಾನಾಗಿಯೇ ಹೋಗಿ ಸಂತೋಷ್ ಅವರನ್ನು ಕೂಡಾ ಟೀಕೆ ಮಾಡಿಲ್ಲ. ನಾನು ಅದಾನಿ ಕಂಪನಿಗೂ ರಾಜ್ಯದಲ್ಲಿ ಅವಕಾಶವಿದೆ ಎಂದು ಟ್ವೀಟ್ ಮಾಡಿದ್ದಕ್ಕೆ ಪ್ರತಿಯಾಗಿ ಬಿ.ಎಲ್ ಸಂತೋಷ್ ಅವರು ??ರಾಹುಲ್ ಗಾಂಧಿ ಅವರಿಗೆ ಜಾಗ ತೋರಿಸಿದ್ದಾರೆ? ಅಂತ ಟೀಕಿಸಿದರು. ನಾನು ಅದಕ್ಕೆ ಪ್ರತಿಕ್ರಿಯಿಸಿದ್ದೆ. ಇದೇ ಕಾರಣಕ್ಕೆ ಬ್ರಾಹ್ಮಣರ ವಿರುದ್ಧ ಟೀಕೆ ಅಂತ ಪ್ರತಾಪ್ ಸಿಂಹ ಬಣ್ಣ ಕಟ್ಟಿದ್ದಾರೆ. ನಾನು ಪ್ರತೀ ದಿನ ಟೀಕೆ ಮಾಡ್ತಿದ್ದೀನಿ ಅಂತ ಹೇಳಿದ್ದಾರೆ. ಎಲ್ಲಿ ಪ್ರತಿದಿನ ಟೀಕೆ ಮಾಡಿದ್ದೇನೆ ಎಂದು ತೋರಿಸಲಿ ಎಂದು ಸವಾಲು ಹಾಕಿದರು.

 

Recent Articles

spot_img

Related Stories

Share via
Copy link
Powered by Social Snap