ಬೆಂಗಳೂರು
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ನಡೆಯುವ ವಸತಿ ಶಾಲೆಗಳಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ ಶೇ.96 ಲಿತಾಂಶ ಪ್ರಕಟವಾಗಿದ್ದು, ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲವೆಂದು ತೋರಿಸಿವೆ.
ಸಾಮಾನ್ಯವಾಗಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವಿಲ್ಲ, ಉತ್ತಮ ಶಿಕ್ಷಕರಿಲ್ಲ, ಅತಿಥಿ ಶಿಕ್ಷಕರಲ್ಲಿಯೇ ಶಾಲೆಗಳನ್ನು ನಡೆಸಲಾಗುತ್ತಿದೆ.
ಮೂಲ ಸೌಕರ್ಯದ ಕೊರತೆ ಇದೆ ಎಂಬ ಹತ್ತಾರು ಕಾರಣಗಳನ್ನು ನೀಡಿ ಸರ್ಕಾರಿ ಶಾಲೆಗಳನ್ನು ದೂಷಿಸಲಾಗುತ್ತದೆ. ಅದೆಲ್ಲ ಸವಾಲುಗಳನ್ನು ಮೆಟ್ಟಿ ನಿಂತಿರುವ ವಸತಿ ಶಾಲೆಗಳು ಶೇ,96 ಲಿತಾಂಶ ನೀಡಿರುವುದು ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿದೆ.
ವಿಶೇಷವಾಗಿ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತ ಬಸಪ್ಪ ಕೊಣ್ಣೂರು ಅವರು ರಾಜ್ಯಕ್ಕೆ ಮೊದಲ ಸ್ಥಾನ 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಮಂಡ್ಯ ಜಿಲ್ಲೆಯ ತುಂಬಗೆರೆ ಮೊರಾರ್ಜಿ ದೇಸಾಯಿ ಶಾಲೆಯ ನವನೀತ್ ಕೆ.ಸಿ. ಅವರು 623 ಅಂಕಗಳನ್ನು ಪಡೆದು 3ನೇ ಸ್ಥಾನ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಶೇ.81.70ರಷ್ಟು ವಿದ್ಯಾರ್ಥಿಗಳು ಉನ್ನತ ಶ್ರೇಣಿ ಮತ್ತು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
2023-14ನೇ ಸಾಲಿನ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ ಶಾಲೆ, ಇಂದಿರಾಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳು ಸೇರಿ 798 ಶಾಲೆಗಳ 35,303 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 33,891 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಇದರಲ್ಲಿ ‘ಎ +’ ದರ್ಜೆಯಲ್ಲಿ 3,126 (ಶೇ.9.22), ‘ಎ’ ದರ್ಜೆಯಲ್ಲಿ 8,108 (ಶೇ.23.92), ‘ಬಿ+’ ದರ್ಜೆಯಲ್ಲಿ 8,753 (ಶೇ.25.83), ‘ಬಿ’ ದರ್ಜೆಯಲ್ಲಿ 7,603 (ಶೇ.22.43), ‘ಸಿ+’ನಲ್ಲಿ 4,992 (ಶೇ.14.73), ‘ಸಿ’ ದರ್ಜೆಯಲ್ಲಿ 1,221 (ಶೇ.3.40) ಮಕ್ಕಳು ಉತ್ತೀರ್ಣರಾಗಿದ್ದಾರೆ. ಕೇವಲ 1,412 (ಶೇ.4)ವಿದ್ಯಾರ್ಥಿಗಳು ಮಾತ್ರ ಅನುತ್ತೀರ್ಣರಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ