ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗೆ ನಾವು ಬದ್ದ: ದಿನೇಶ್‌ ಗುಂಡೂರಾವ್‌

ಬೆಂಗಳೂರು:

     ಬೆಂಗಳೂರು-ಮಂಗಳೂರು ನಡುವೆ ಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ಅಸ್ತಿತ್ವಕ್ಕೆ ಬರುವುದು ಮಂಗಳೂರು ಹಾಗೂ ಈ ಮಾರ್ಗದಲ್ಲಿ ಬರುವ ಎಲ್ಲಾ ನಗರಗಳ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

    ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್,  ಯೋಜನೆಯ ಸಲಹಾ ಮತ್ತು ಫೆಸಿಲಿಟೇಷನ್ ಸಂಸ್ಥೆ ಯುರೋಪಿಯನ್ ಉದ್ಯಮ ಹಾಗೂ ತಂತ್ರಜ್ಞಾನ ಕೇಂದ್ರ (ಇಬಿಟಿಸಿ) ನ ಉನ್ನತಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಚಿವರು ಮಾತನಾಡಿದರು. ಈ ವೇಳೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮಿ ಹೆಬ್ಬಾಳ್ಕರ್ ಸಹ ಭಾಗಿಯಾಗಿದ್ದರು. 

    ಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ಯೋಜನೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ 6-8 ಪಥಗಳ ಹೈಸ್ಪೀಡ್ ಕಾರಿಡಾರ್ ನಿರ್ಮಾಣದ ಪ್ರಸ್ತಾವನೆ ಹೊಂದಿದೆ.

 
     ಮಂಗಳೂರಿನ ಸುಸ್ಥಿರ ಅಭಿವೃದ್ಧಿಗೆ ಸಹಕಾರಿಯಾಗುವ ಇಂತಹ ಯೋಜನೆಗಳಿಗೆ ರಾಜ್ಯ ಸರ್ಕಾರ ಉತ್ತೇಜನ ನೀಡಲಿದೆ ಎಂದು ಹೇಳಿರುವ ಸಚಿವರು, ಈ ರೀತಿಯ ಉದ್ಯಮಗಳ ಅನುಷ್ಠಾನಕ್ಕೆ ಖಾಸಗಿ ಸಹಭಾಗಿತ್ವದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap