ಸುಖ್ ಧೂಲ್ ಸಿಂಗ್ ಹತ್ಯೆ ಮಾಡಿದ್ದು ನಾವೇ ಎಂದಿದ್ದಾರು ಯಾರು ….?

ನವದೆಹಲಿ :

     ಕೆನಡಾದಲ್ಲಿ ಹತ್ಯೆಗೀಡಾದ ಖಲಿಸ್ತಾನಿ ಉಗ್ರ ಸುಖ್ ಧೂಲ್ ಸಿಂಗ್ ಅಲಿಯಾಸ್ ಸುಖಾ ದುನೆಕೆ ಹತ್ಯೆ ಮಾಡಿದ್ದು ನಾವೇ ಎಂದು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊಣೆಹೊತ್ತುಕೊಂಡಿದೆ.

    ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ಹಿಂದೆ ಭಾರತ ಸರ್ಕಾರದ ಕೈವಾಡವಿದೆ ಎಂಬ ಹೇಳಿಕೆಯಿಂದ ಭಾರತ ಹಾಗೂ ಕೆನಡಾ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ನಡುವಲ್ಲೇ ಕೆನಾಡದಲ್ಲಿ ಮತ್ತೊರ್ವ ಖಲಿಸ್ತಾನಿ ಉಗ್ರ ನಾಯಕ ಸುಖಾ ದುನೆಕೆ ಹತ್ಯೆಯಾಗಿದೆ.

    ಕೆನಡಾದ ಮೊಗಾ ಜಿಲ್ಲೆಯಲ್ಲಿ ದವೀಂದರ್ ಬಾಂಬಿಹಾ ಗ್ಯಾಂಗ್‌ನ ಸುಖದುಲ್ ಸಿಂಗ್ ಅಲಿಯಾಸ್ ಸುಖ ದುನೆಕೆಯನ್ನು ಬುಧವಾರ ರಾತ್ರಿ ಕೆನಡಾದ ವಿನ್ನಿಪೆಗ್ ನಗರದಲ್ಲಿ ಹತ್ಯೆ ಮಾಡಲಾಗಿದೆ. ಗ್ಯಾಂಗ್ ವಾರ್ ನಲ್ಲಿ ಈ ಹತ್ಯೆಯಾಗಿದೆ ಎಂದು ಮೂಲಗಳು ತಿಳಿಸಿವೆ.

    ಭಯೋತ್ಪಾದಕ ಸುಖದೂಲ್ ಸಿಂಗ್ ಹತ್ಯೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ ಎಂದು ಫೇಸ್‌ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಫೇಸ್ ಬುಕ್ ನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹಾಕಲಾದ ಪೋಸ್ಟ್‌ನಲ್ಲಿ ದರೋಡೆಕೋರರಾದ ಗುರ್ಲಾಲ್ ಬ್ರಾರ್ ಮತ್ತು ವಿಕ್ಕಿ ಮಿಡ್ಖೇರಾ ಅವರ ಹತ್ಯೆಯಲ್ಲಿ ಸುಖ ಡುನುಕೆ ಎಂದೂ ಕರೆಯಲ್ಪಡುವ ಸುಖದೂಲ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿಕೊಂಡಿದ್ದು ಇದರ ಸೇಡು ತೀರಿಸಿಕೊಳ್ಳಲು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಯೋಜನೆ ರೂಪಿಸಿ ಹತ್ಯೆ ಮಾಡಿದೆ ಎಂದು ಹೇಳಿಕೊಂಡಿದೆ.

    2017 ರಲ್ಲಿ ನಕಲಿ ಪಾಸ್‌ಪೋರ್ಟ್‌ನಲ್ಲಿ ಪಂಜಾಬ್‌ನ ಮೊಗಾದಿಂದ ಕೆನಡಾಕ್ಕೆ ಪಲಾಯನ ಮಾಡಿದ ಡುನೆಕೆ “ಎ” ವರ್ಗದ ದರೋಡೆಕೋರನಾಗಿದ್ದ. ಆತ ಭಯೋತ್ಪಾದಕ ಅರ್ಷ್‌ದೀಪ್ ದಲ್ಲಾನ ನಿಕಟ ಸಹಚರನಾಗಿದ್ದ ಮತ್ತು ಖಲಿಸ್ತಾನ್ ಮತ್ತು ಕೆನಡಾದೊಂದಿಗೆ ಸಂಪರ್ಕ ಹೊಂದಿರುವ 43 ದರೋಡೆಕೋರರಲ್ಲಿ ಈತನೂ ಒಬ್ಬರಾಗಿದ್ದ. ಬುಧವಾರ ರಾತ್ರಿ ಈತನನ್ನು ಹತ್ಯೆ ಮಾಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap