ಬೆಳೆಗಾರರ ಹಿತರಕ್ಷಣೆಗೆ ಸರ್ಕಾರ ಬದ್ಧ : ಮುನಿರತ್ನ

ಬೆಂಗಳೂರು

    ದ್ರಾಕ್ಷಿ ಬೆಳೆಗಾರರ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಿದ್ದು, ಬೆಳೆಗಾರರ ಹಿತರಕ್ಷಣೆಗೆ ಸರ್ಕಾರ ಬದ್ಧ. ಅದಕ್ಕಾಗಿ ಸರ್ಕಾರ ಬಜೆಟ್ ನಲ್ಲಿ 3 ಕೋಟಿ ರೂಪಾಯಿ ಘೋಷಣೆ ಮಾಡಿದೆ ಎಂದು ತೋಟಗಾರಿಕಾ ಸಚಿವ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವ ಮುನಿರತ್ನ ವಿಧಾನಸಭೆಗಿಂದು ತಿಳಿಸಿದರು.

    ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರ ಪ್ರಸ್ತಾಪಗಳಿಗೆ ಉತ್ತರಿಸಿದ ಅವರು, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಶೈತ್ಯಾಗಾರಗಳನ್ನು ತೆರೆದು, ದ್ರಾಕ್ಷಿ ಬೆಳೆಗಾರರಿಗೆ ಅನುಕೂಲ ಮಾಡಿಕೊಡಲಾ ಗುವುದು. ಆ ಜಿಲ್ಲೆಗಳಿಂದ ನೆರೆ ಮಹಾರಾಷ್ಟçದ ಮಾರುಕಟ್ಟೆಗೆ ಹೋಗುತ್ತಿದ್ದ ದ್ರಾಕ್ಷಿಯನ್ನು ರಾಜ್ಯದಲ್ಲೇ ಮಾರಾಟ ಮಾಡಲು ಅನುಕೂಲ ಕಲ್ಪಿಸಲಾಗುವುದು. ಅದಕ್ಕಾಗಿ ವೈನ್ ಪಾರ್ಕ್ ನಿರ್ಮಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

    ಬೆಂಗಳೂರಿನ  ಕಾನೂನು ಶಾಲೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಮೀಸಲು ದೊರಕದ ಕುರಿತು ಶಾಸಕ ಸುರೇಶ್ ಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವ ಮಾಧುಸ್ವಾಮಿ, ಸರ್ಕಾರ ಜಾರಿಗೊಳಿಸಿರುವ ಕಾಯ್ದೆಯ ಪ್ರಕಾರ, ಎನ್ ಎಲ್ ಎಸ್ ಯುನಲ್ಲಿ ಶೇಕಡಾ 25ರಷ್ಟು ಸೀಟುಗಳು ಸ್ಥಳೀಯ ವಿದ್ಯಾರ್ಥಿಗಳಿಗೆ ನೀಡಲೇಬೇಕು. ಇದರಲ್ಲಿ ಯಾವುದೇ ರಾಜೀ ಇಲ್ಲ. ಈ ಕುರಿತಂತೆ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ರಾಜ್ಯಕ್ಕೆ ನ್ಯಾಯ ದೊರಕಲಿದೆ ಎಂದರು.

     ರಾಜ್ಯದ ಶಾಸನದಡಿ ಸ್ಥಾಪನೆಯಾಗಿರುವ ಕಾನೂನು ಶಾಲೆಗೆ ಸರ್ಕಾರವೇ ನೆಲ, ಜಲ ನೀಡುತ್ತಿದ್ದು, ಸ್ಥಳೀಯರಿಗೆ ಮೀಸಲು ಸೌಲಭ್ಯ ದೊರಕಬೇಕು. ಈ ಕುರಿತಂತೆ ಹೋರಾಟ ಮುಂದುವರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap