ಸಹಬಾಳ್ವೆ ಸಹಿಷ್ಣುತೆಯಲ್ಲಿ ನಮಗೆ ನಂಬಿಕೆ ಇದೆ : ಸಿಎಂ

ಬೆಂಗಳೂರು: 

    ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ

    ಬೆಂಗಳೂರಿನ GAFX ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಿಂದೂ ವಿರೋಧಿ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ

ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ:

     ಬಿಜೆಪಿಯವರು ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ರಾಷ್ಟ್ರ ಧ್ವಜವನ್ನು ಹಾರಿಸಲು ಅವರು ಅನುಮತಿ ಪಡೆದಿದ್ದು ಅದನ್ನೇ ಹಾರಿಸಬೇಕು. ಜಿಲ್ಲಾಡಳಿತ ಅದಕ್ಕೆ ಕ್ರಮ ವಹಿಸಿದೆ ಎಂದರು

ಅನಗತ್ಯ ವಿವಾದ:

     ಬಿಜೆಪಿಯವರು ಅನಗತ್ಯವಾಗಿ ವಿವಾದ ಹುಟ್ಟುಹಾಕ್ತಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಮಂಡ್ಯಕ್ಕೆ ಭೇಟಿ ನೀಡಿ ಪ್ರಚೋದನೆ ನೀಡುತ್ತಿದ್ದಾರೆ. ಪ್ರಚೋದನೆ ಯಾಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದಾಗ, ಮುಖ್ಯಮಂತ್ರಿಗಳು ಚುನಾವಣೆ ಹತ್ತಿರ ಬರುತ್ತಿದ್ದು, ಅದಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು. ಪಂಚಾಯತಿಯವರು ನೀಡಿದ್ದ ಅನುಮತಿಯಂತೆ ನಡೆದುಕೊಂಡಿದ್ದಾರೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡುತ್ತಿರಲಿಲ್ಲ ಎಂದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap