ನವದೆಹಲಿ:
ಅವರು ಎರಡು ಹೆಜ್ಜೆ ಮುಂದೆ ಬರಬೇಕು. ನಾವೂ ಎರಡು ಹೆಜ್ಜೆ ಮುಂದೆ ಹೋಗುತ್ತೇವೆಂದು ಕೇಂದ್ರ ಪ್ರತಿಪಕ್ಷಗಳು ಮಾತುಕತೆಗೆ ಮುಂದಾದರೆ ಸಂಸತ್ತಿನಲ್ಲಿ ಉಂಟಾಗಿರುವ ಸಮಸ್ಯೆಗಲನ್ನು ಪರಿಹರಿಸಬಹುದು. ಅವರು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ರಾಜಕೀಯಕ್ಕಿಂತ ಮೇಲಾದ ವಿಷಯಗಳಿವೆ. ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಕೂಡ ವಿದೇಶಿ ನೆಲದಲ್ಲಿ ದೇಶದ ರಾಜಕೀಯದ ಬಗ್ಗೆ ಚರ್ಚಿಸಲು ನಿರಾಕರಿಸಿದ್ದರು. ಸಂಸತ್ತಿನಲ್ಲಿ ಸೃಷ್ಟಿಯಾಗಿರುವ ಕೋಲಾಹವನ್ನು ಪರಿಹರಿಸಲು ಸರ್ಕಾರ ಮತ್ತು ಪ್ರತಿಪಕ್ಶಗಳು ಎರಡೂ ಸಭಾಧ್ಯಕ್ಷರ ಮುಂದೆ ಕುಳಿತು ಚರ್ಚಿಸಬೇಕು.
ಅವರು ಎರಡು ಹೆಜ್ಜೆ ಮುಂದೆ ಬರಬೇಕು. ನಾವೂ ಎರಡು ಹೆಜ್ಜೆ ಮುಂದೆ ಹೋಗುತ್ತೇವೆಂದು. ಆಗ ಸಂಸತ್ತು ಸುಗಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ. ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರೆ, ಏನನ್ನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕೇವಲ ಖಜಾನೆ ಅಥವಾ ವಿರೋಧ ಪಕ್ಷಗಳಿಂದ ಸಂಸದೀಯ ವ್ಯವಸ್ಥೆಯನ್ನು ನಡೆಸಲು ಸಾಧ್ಯವಿಲ್ಲ. ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದ್ದರೂ, ವಿರೋಧ ಪಕ್ಷಗಳು ಸಿದ್ಧರಿಲ್ಲ. ನಾವು ಯಾರೊಂದಿಗೆ ಮಾತನಾಡಬೇಕು. ಅವರು ಮಾಧ್ಯಮಗಳ ಮುಂದೆ ಕುಳಿತು ಮಾತನಾಡುತ್ತಿದ್ದಾರೆ. ಸಂಸತ್ತಿನಲ್ಲಿ ಬಂದು ವಾಕ್ ಸ್ವಾತಂತ್ರ್ಯ ಬೇಕೆಂದು ಘೋಷಣೆ ಕೂಗುತ್ತಾರೆ. ಅವರಿಗೆ ಸಂಪೂರ್ಣ ವಾಕ್ ಸ್ವಾತಂತ್ರ್ಯವಿದೆ. ಸಂಸತ್ತಿನಲ್ಲಿ ನೀವು ಮಾತನಾಡುವುದನ್ನು ಯಾರಿಂದರೂ ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.