ಮೈಸೂರು:
ರೂ.240 ಕೋಟಿ ವೆಚ್ಚದಲ್ಲಿ ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ, ವಸತಿ ನಿಲಯಗಳ ನಿರ್ಮಾಣ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಿಳಿಸಿದರು.ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ನಿನ್ನೆಯಷ್ಟೇ ಭೇಟಿ ನೀಡಿದ ಮುಖ್ಯಮಂತ್ರಿಗಳು, ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಹಿಂದಿನ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಿರ್ಲಕ್ಷಿಸಿದೆ. ಮಹಾರಾಣಿ ವಿಜ್ಞಾನ ಕಾಲೇಜು ಈಗಾಗಲೇ ಕುಸಿದಿದ್ದು, ಕಾಲೇಜು ಮುಂಭಾಗದಲ್ಲಿರುವ ಪಾರಂಪರಿಕ ಕಟ್ಟಡವನ್ನು ಬಲಪಡಿಸಲು ನಿರ್ದೇಶನ ನೀಡಲಾಗಿದೆ. ಉಳಿದವುಗಳನ್ನು ಪುನರ್ ನಿರ್ಮಿಸಲಾಗುವುದು. ರೂ. 17 ಕೋಟಿ ವೆಚ್ಚದಲ್ಲಿ ಕಲಾ ಕಾಲೇಜು, ರೂ.51 ಕೋಟಿ ವೆಚ್ಚದಲ್ಲಿ ವಿಜ್ಞಾನ ಕಾಲೇಜು, ರೂ.99 ಕೋಟಿ ವೆಚ್ಚದಲ್ಲಿ ವಸತಿ ನಿಲಯ ಹಾಗೂ ರೂ.40 ಕೋಟಿ ವೆಚ್ಚದಲ್ಲಿ ವಾಣಿಜ್ಯ ಕಾಲೇಜು ಕಟ್ಟಡ ನಿರ್ಮಾಣಮಾಡಲಾಗುವುದು ಎಂದು ಹೇಳಿದರು.
ಸರ್ಕಾರ ಬರ ಪರಿಹಾರ ಕಾಮಗಾರಿ ಆರಂಭಿಸಿದ್ದು, ಜಾನುವಾರುಗಳಿಗೆ ಮೇವು ನೀಡಲಾಗುತ್ತಿದೆ. ರಾಜ್ಯದ ಎಲ್ಲ ಭಾಗಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ವಿದ್ಯುತ್ ಅಭಾವ ಕುರಿತು ಪ್ರತಿಕ್ರಿಯಿಸಿ, ಸರ್ಕಾರವು ಕೃತಕ ವಿದ್ಯುತ್ ಕೊರತೆಯನ್ನು ಸೃಷ್ಟಿಸಿಲ್ಲ. ಕಲ್ಲಿದ್ದಲು ಬಳಸಿ ವಿದ್ಯುತ್ ಉತ್ಪಾದಿಸಲಾಗುತ್ತದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
ಕ್ಷಣಕ್ಷಣದ ಮಾಹಿತಿಗಾಗಿ ಪ್ರಜಾಪ್ರಗತಿ ಟೆಲಿಗ್ರಾಂ ಚಾನಲ್ ಗೆ ಭೇಟಿ ಕೊಡಿ