ನವದೆಹಲಿ :
ಕಳೆದೊಂದುವರ್ಷದ ಹಿಂದೆ ಉಕ್ರೇನ್ ಮೇಲೆ ದಾಳಿ ಆರಂಭಿಸಿದ ರಷ್ಯ ಸರ್ಕಾರ ನಾವು ನಮ್ಮ ಎದುರಾಳಿಗೆ ನೆರವಿನ ಹಸ್ತ ಚಾಚಿರುವ ನ್ಯಾಟೋದ ಪರಮಾಣು ಸಾಮರ್ಥ್ಯವನ್ನು ಎಂದಿಗೂ ನಿರ್ಲಕ್ಷಿಸುವಂತಿಲ್ಲ ಎಂದು ಹೇಳಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತೆ ಪರಮಾಣು ಯುದ್ದದ ಬೆದರಿಕೆ ಹಾಕಿದ್ದಾರೆ.
ಉಕ್ರೇನ್ ಶಸ್ತ್ರಾಸ್ತ್ರ ನೆರವು ನೀಡುತ್ತಿರುವ ಅಮೆರಿಕ ಪರಮಾಣು ಶಸ್ತ್ರಾಸ್ತ್ರ ಸಾಮಥ್ರ್ಯಗಳನ್ನು ರಷ್ಯಾ ಗಣನೆಗೆ ತೆಗೆದುಕೊಳ್ಳುತ್ತದೆ. ನಮ್ಮ ದೇಶವನ್ನು ಸಂರಕ್ಷಿಸಲು, ಭದ್ರತೆ ಮತ್ತು ಕಾರ್ಯತಂತ್ರದ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಉಕ್ರೇನ್ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
