ನಾವು ಸತ್ಯ ಮುಂದಿಟ್ಟು ಪ್ರಚಾರ ಮಾಡುತ್ತೇವೆ : ಸಿದ್ದರಾಮಯ್ಯ

ಕೋಲಾರ: 

   ಕುರುಡುಮಲೆ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯವನ್ನು ಇಂದು ಶನಿವಾರ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭಿಸಿದರು.

   ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣಾ ಪ್ರಚಾರ ಕಾರ್ಯ ಈಗಾಗಲೇ ಆರಂಭವಾಗಿದೆ ಆದರೆ ಇಂದು ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮುಳುಬಾಗಿಲಿನಿಂದನಿಂದ ಅಧಿಕೃತವಾಗಿ ಆರಂಭವಾಗಲಿದೆ ಎಂದು ಹೇಳಿದರು. ಚಾಮರಾಜನಗರ, ಮೈಸೂರು-ಕೊಡಗು ಮತ್ತು ಚಿತ್ರದುರ್ಗ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದೇನೆ. ಬಿಜೆಪಿ ನಾಯಕರು ಸುಳ್ಳಿನ ಮೇಲೆ ಪ್ರಚಾರ ಮಾಡುತ್ತಾರೆ ಅದರೆ ಕಾಂಗ್ರೆಸ್ ಸತ್ಯದ ಮೇಲೆ ಪ್ರಚಾರ ಮಾಡಲಿದೆ ಎಂದು ಹೇಳಿದರು.

    ಈ ವೇಳೆ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್, 1999ರಲ್ಲಿ ಎಸ್.ಎಂ.ಕೃಷ್ಣ ಕುರುಡುಮಲೆಯಿಂದ ಪಾಂಚಜನ್ಯ ಯಾತ್ರೆ ಆರಂಭಿಸಿ ಪಕ್ಷ ಅಧಿಕಾರಕ್ಕೆ ತಂದಿದ್ದರು. ಈಗ ಅದೇ ರೀತಿ ನಾನು ಪಾಂಚಜನ್ಯ ಮೊಳಗಿಸಲಿದ್ದೇನೆ. ತನ್ವೀರ್ ಸೇಠ್​ರನ್ನ ಭೇಟಿ ಮಾಡಿ ಚರ್ಚೆ ಮಾಡುವೆ ಎಂದು ರಾಮಸಂದ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಇನ್ನು ಡಿಕೆ ಶಿವಕುಮಾರ್ ಅವರಿಗೆ ರಾಮಲಿಂಗಾರೆಡ್ಡಿ, ಕೆ.ಆರ್.ರಮೇಶ್ ಕುಮಾರ್, ಕೆ.ಹೆಚ್.ಮುನಿಯಪ್ಪ, ಬಿ.ಕೆ.ಹರಿಪ್ರಸಾದ್ ಸಾಥ್ ನೀಡಿದರು.

    ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆಗೆ ತೆರಳಿದ ಡಿ.ಕೆ.ಶಿವಕುಮಾರ್, ಕುರುಡುಮಲೆ ಗಣೇಶ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಕೋಲಾರದಲ್ಲಿ ಜನಧ್ವನಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ಇಂದು ಕುರುಡುಮಲೆಗೆ ಭೇಟಿ ನೀಡಿ ವಿನಾಯಕನಿಗೆ ಪೂಜೆ ಸಲ್ಲಿಸಲಾಗಿದೆ.

  ದರ್ಗಾಗೆ ಡಿಕೆಶಿ ಭೇಟಿ ಮುಳಬಾಗಿಲು ಪಟ್ಟಣದಲ್ಲಿರುವ ಪುರಾತನ ಇತಿಹಾಸ ಹೋದಿರುವ ಹೈದರ್ ಸಾಬ್ ದರ್ಗಾಕ್ಕೆ ಡಿಕೆಶಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಡಿಕೆಶಿ ಜೊತೆ ಸ್ಥಳೀಯ ಮುಖಂಡರು ಹಾಗೂ ರಾಜ್ಯ ನಾಯಕರು ಭಾಗಿಯಾಗಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap