ಬೆಂಗಳೂರು:
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ವೇಳಅಪಟ್ಟಿ ಘೋಷಣೆಯಾಗಿದ್ದು ,ಈ ಬಾರಿ ಅಧಿಕಾರದ ಗದ್ದುಗೆ ಏರಲು ರಾಜಕೀಯ ಪಕ್ಷಗಳು ಪ್ರಯತ್ನ ನಡೆಸುತ್ತಿದ್ದು, ಗೆಲ್ಲುವ ವಿಶ್ವಾಸವನ್ನ ವ್ಯಕ್ತಪಡಿಸುತ್ತಿವೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾಧ್ಯಮದವರೊಂದಿಗೆ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಆಪರೇಷನ್ ಕಮಲ ಇಲ್ಲದೇ ಬಿಜೆಪಿ 130 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನೂ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಬಿಜೆಪಿ ಹೊಸ ಪ್ರಯೋಗದ ಕುರಿತು ಮಾತನಾಡಿ, ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿ ಅನುಸರಿಸುತ್ತಿರುವ ಪ್ರಕ್ರಿಯೆ ದೇಶದಲ್ಲೇ ವಿಶಿಷ್ಟವಾಗಿದೆ. ಅಭ್ಯರ್ಥಿಗಳು ಈ ಹಿಂದೆ ಬೆಂಗಳೂರು ಅಥವಾ ದೆಹಲಿಯ ಹೈಕಮಾಂಡ್ ನಾಯಕರ ಬಳಿ ಟಿಕೆಟ್‌ಗಾಗಿ ಲಾಬಿ ನಡೆಸುತ್ತಿದ್ದರು ಆದರೆ ಈಗ ಬಿಜೆಪಿ ವೀಕ್ಷಕರು ಮತ್ತು ಪಕ್ಷದ ಪದಾಧಿಕಾರಿಗಳ ಸಹಾಯದಿಂದ ವಿವಿಧ ಅಭ್ಯರ್ಥಿಗಳ ಮಾಹಿತಿ ಸಂಗ್ರಹಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತಿದೆ ಎಂದರು.
ಈಗಾಗಲೇ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂರು ಸಂಭಾವ್ಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿಯ ಜಿಲ್ಲಾ ಕೋರ್ ಕಮಿಟಿಗಳು ಸಭೆಗಳನ್ನು ನಡೆಸುತ್ತಿವೆ. ಪ್ರತಿ ಕ್ಷೇತ್ರದಿಂದ ಮೂರು ಅಭ್ಯರ್ಥಿಗಳ ಪಟ್ಟಿಯನ್ನು ಕಳುಹಿಸಲಾಗುವುದು, ನಂತರ ದೆಹಲಿಯಲ್ಲಿ ಪಕ್ಷದ ಉನ್ನತ ನಾಯಕತ್ವವು ಅರ್ಹತೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತದೆ. ರಾಜ್ಯದಲ್ಲಿ ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿಯೊಳಗೆ ಅಭ್ಯರ್ಥಿಗಳಿಗೆ ಯಾವುದೇ ಗೊಂದಲವಿಲ್ಲದೆ ಅಭ್ಯರ್ಥಿಯ ಆಯ್ಕೆಯನ್ನ ಹೈಕಮಾಂಡ್ ನಡೆಸುತ್ತದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ