ಮೊದಲ ಕ್ಯಾಬಿನೆಟ್​ನಲ್ಲೇ 5 ಗ್ಯಾರಂಟಿ ಈಡೇರಿಸುವೆವು : ಡಾ. ಜಿ ಪರಮೇಶ್ವರ್‌

ಬೆಂಗಳೂರು:

     ಮೊದಲ ಕ್ಯಾಬಿನೆಟ್​ನಲ್ಲೇ 5 ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ಧರಾಗಿ ಇರುತ್ತೇವೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಷರತ್ತುಗಳು ಇರಲಿವೆ ಎಂದು ಹಿರಿಯ ನಾಯಕ ಪರಮೇಶ್ವರ್‌  ಹೇಳಿದ್ದಾರೆ.

     ಚುನಾವಣೆಯಲ್ಲಿ ಗೆಲ್ಲುವ ಮುನ್ನ 5 ಉಚಿತ ಗ್ಯಾರೆಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್​, ಅಧಿಕಾರಕ್ಕೆ ಬರುತ್ತಿದ್ದಂತೆ ತನ್ನ ವರಸೆ ಬದಲಾಯಿಸಿದೆ. ಕಾಂಗ್ರೆಸ್​ ಗ್ಯಾರೆಂಟಿಗಳಿಗೆ ಷರತ್ತು ವಿಧಿಸುವುದಾಗಿ ಜಿ. ಪರಮೇಶ್ವರ್​ ಹೇಳಿದ್ದಾರೆ. ಈ ಹಿಂದೆ ಷರತ್ತಿನ ಬಗ್ಗೆ ತಿಳಿಸದೇ ಎಲ್ಲರಿಗೂ ಉಚಿತ ಎಂದು ಕಾಂಗ್ರೆಸ್​ ಹೇಳಿತ್ತು.  

    ಗ್ರಾಮೀಣ ಭಾಗದ ಜನರು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ವಿದ್ಯುತ್‌ ಶುಲ್ಕ ಪಾವತಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೊದಲ ಕ್ಯಾಬಿನೆಟ್‌ನಲ್ಲಿ 5 ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ದರಾಗಿ ಇದ್ದು ಮೊದಲ ಕ್ಯಾಬಿನೆಟ್‌ನಲ್ಲಿ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap